ರಾಜ್ಯದ ಹಿರಿಯ ಪೋಲೀಸ್ ಅಧಿಕಾರಿಗಳ ವರ್ಗಾವಣೆ, ಮಂಗಳೂರಿಗೆ ನೂತನ ಕಮೀಷನರ್ ಆಗಿ ವಿಕಾಸ್ ಕುಮಾರ್ ವಿಕಾಸ್ ನೇಮಕ

ಮಂಗಳೂರು: ರಾಜ್ಯ ಸರ್ಕಾರ 13 IPS ಅಧಿಕಾರಿಗಳ ವರ್ಗಾವಣೆಯನ್ನು ಮಾಡಿದ್ದು ಮಂಗಳೂರು ನಗರದ ಪೊಲೀಸ್ ಆಯುಕ್ತರಾಗಿದ್ದ ಡಾ. ಪಿ.ಎಸ್. ಹರ್ಷಾ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಮಂಗಳೂರಿನಲ್ಲಿ ನಡೆದ ಸಿಎಎ, ಎನ್ ಆರ್ ಸಿ ಗಲಭೆ ಸೇರಿದಂತೆ ಅನೇಕ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸಿದ ಹೆಗ್ಗಳಿಗೆ ಹರ್ಷವರಿಗಿತ್ತು. ಇನ್ನು ಮಂಗಳೂರು ಪೊಲೀಸ್ ಕಮೀಷನರ್ ಆಗಿ ನೇಮಕಗೊಳ್ಳುವ ಮುನ್ನ ಹರ್ಷ ಅವರು ವಾರ್ತಾ ಇಲಾಖಾ ಕಮೀಷನರ್ ಆಗಿ ಕಾರ್ಯವನ್ನು ನಿರ್ವಹಿಸಿದ್ದರು.

READ ALSO

ಮಂಗಳೂರಿಗೆ ನೂತನ ಪೊಲೀಸ್ ಕಮೀಷನರ್ ಆಗಿ ವಿಕಾಸ್ ಕುಮಾರ್ ವಿಕಾಸ್ ಅವರನ್ನು ನೇಮಕಗೊಳಿಸಿ ಆದೇಶ ನೀಡಲಾಗಿದೆ.

ಕೊರೊನಾ ಸಂಕಷ್ಟದ ಸಂದರ್ಭದಲ್ಲೇ ಸರಕಾರ ಆಡಳಿತಾತ್ಮಕ ಕ್ಷೇತ್ರದಲ್ಲಿ ಮೇಜರ್ ಸರ್ಜರಿ ನಡೆಸಿದೆ. ವಿಕಾಸ್ ಕುಮಾರ್ ವಿಕಾಸ್ ಈ ಹಿಂದೆ ನಕ್ಸಲ್ ನಿಗ್ರಹ ಪಡೆಯ ಡಿಐಜಿಪಿಯಾಗಿದ್ದರು.

ಇನ್ನು ಡಾ. ಹರ್ಷಾ ಅವರನ್ನು ಬೆಂಗಳೂರು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಡಿಐಜಿಯಾಗಿ ನೇಮಕಗೊಳಿಸಿ ಆದೇಶ ನೀಡಲಾಗಿದೆ.

ತಕ್ಷಣದಿಂದಲೇ ಜಾರಿಗೆ ಬರುವಂತೆ ಸರಕಾದ ಮುಖ್ಯ ಕಾರ್ಯದರ್ಶಿ ನಾಗಪ್ಪ ಎಸ್. ಪಾಟೀಲ್ ಆದೇಶ ನೀಡಿದ್ದಾರೆ