ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ನಿಯಂತ್ರಣ ತಪ್ಪಿದ ಪೊಲೀಸ್ ವಾಹನವೊಂದು ದಿನಸಿ ಅಂಗಡಿಗೆ ನುಗ್ಗಿದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಧರ್ಮಸ್ಥಳ – ಕಾರ್ಕಳ ಹೆದ್ದಾರಿಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಕಾರ್ಕಳ ಆರಕ್ಷಕ ಠಾಣೆಯ ಬೊಲೆರೋ ವಾಹನ ಚಾಲಕನ ನಿಯಂತ್ರಣ ತಪ್ಪಿ ನಾರಾವಿ ಕೆಳಗಿನ ಪೇಟೆಯ ರಮೇಶ್ ಎಂಬವರ ಮಾಲೀಕತ್ವದ ದಿನಸಿ ಅಂಗಡಿಗೆ ನುಗ್ಗಿದ್ದು, ಈ ವೇಳೆ ಅಂಗಡಿಯಲ್ಲಿದ್ದ ಇಬ್ಬರು ಮಹಿಳೆಯರಿಗೆ ಗಾಯವಾಗಿದೆ. ಗಾಯಗೊಂಡ ಮಹಿಳೆಯರನ್ನು ಕಾರ್ಕಳದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಂಗಡಿ ಮಾಲೀಕ ರಮೇಶ್ ಅದೃಷ್ಟವಶಾತ್ ಸಂಭಾವ್ಯ ಅಪಾಯದಿಂದ ಪಾರಾಗಿದ್ದಾರೆ. ವಾಹನ ಗುದ್ದಿದ ರಭಸಕ್ಕೆ ಅಂಗಡಿ ಸೊತ್ತುಗಳು ಪುಡಿಪುಡಿಯಾಗಿದೆ ಎಂದು ತಿಳಿದುಬಂದಿದೆ.