ವಕೀಲರು-ಪೊಲೀಸರ ಫೈಟ್, ಪೋಲೀಸರ ಅಮಾನತು ವಿರೋಧಿಸಿ ಕರ್ತವ್ಯ ಬಿಟ್ಟು ರಸ್ತೆಗಳಿಸಿದ ಖಾಕಿ ಪಡೆ!

ಚಿಕ್ಕಮಗಳೂರು: ವಕೀಲರು ಹಾಗೂ ಪೊಲೀಸರ ನಡುವಿನ ಗಲಾಟೆ ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಚಿಕ್ಕಮಗಳೂರಿನ ಯುವ ವಕೀಲನ ಮೇಲೆ ಪೊಲೀಸ್ ಸಿಬ್ಬಂದಿ ಅಮಾನುಷವಾಗಿ ಥಳಿಸಿದ್ದಾರೆ ಎಂದು ವಕೀಲರು ಪ್ರತಿಭಟನೆ ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರ ಹಲ್ಲೆ ನಡೆಸಿದ 6 ಪೊಲೀಸರ ಅಮಾನತು ಮಾಡಿತ್ತು. ಇದು ಪೊಲೀಸರ ಆಕ್ರೋಶಕ್ಕೆ ಕಾರಣವಾಗಿತ್ತು. ಇಲ್ಲಿಂದ ಆರಂಭಗೊಂಡ ಜಟಾಪಟಿ ಇದೀಗ ಮತ್ತೊಂದು ಹಂತ ತಲುಪಿದೆ. ಅಮಾನತು ಮಾಡಿರುವ ಪೊಲೀಸರ ಬೈಕಿ ಓರ್ವ ಪೊಲೀಸ್‌ನ ಬಂಧಿಸಿರುವುದು ಚಿಕ್ಕಮಗಳೂರು ಪೊಲೀಸರ ಕೆರಳಿಸಿದೆ. ಕರ್ತವ್ಯಕ್ಕೆ ಹಾಜರಾಗಬೇಕಿದ್ದ ಪೊಲೀಸರು ನೇರವಾಗಿ ರಸ್ತೆಗಿಳಿದು ಪ್ರತಿಭಟನೆ ಮಾಡಿದ್ದಾರೆ. ಕಡೂರು-ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರ ಪ್ರತಿಭಟನೆಯಿಂದ ಹೆದ್ದಾರಿ ಜಾಮ್ ಆಗಿದೆ.

ಕ್ಷಣಕ್ಷಣಕ್ಕೂ ಚಿಕ್ಕಮಗಳೂರು ವಕೀಲರು ಹಾಗೂ ಪೊಲೀಸರ ನಡುವಿನ ಗಲಾಟೆ ಪ್ರಕರಣ ಜೋರಾಗುತ್ತಿದೆ. 200ಕ್ಕೂ ಹೆಚ್ಚು ಪೊಲೀಸರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ 173 ಬಂದ್ ಮಾಡಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಚಂದ್ರಗುಪ್ತ ಭೇಟಿ ನೀಡಿ ಪೊಲೀಸರ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಯಾವುದೇ ಪ್ರಯತ್ನಕ್ಕೂ ಪೊಲೀಸರು ಬಗ್ಗುತ್ತಿಲ್ಲ.

ಪ್ರತಿಭಟನೆ ತೀವ್ರಗೊಳಿಸಿರುವ ಕಾರಣ ನಗರದಲ್ಲಿ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದೆ.ರಸ್ತೆ ಉದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿದೆ. ಹನುಮಂತಪ್ಪ ವೃತ್ತದ ಬಳಿ ನೂರಾರು ಪೊಲೀಸರು ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದಾರೆ. ನಗರ ಪೊಲೀಸ್ ಠಾಣೆಯಿಂದ ಡಿವೈಎಸ್ಪಿ ಕಚೇರಿಗೆ ಪ್ರತಿಭಟನೆ ಮಾಡಿಕೊಂಡು ಹೊರಟ ಪೊಲೀಸರು ಘೋಷಣೆ ಕೂಗಿದ್ದಾರೆ. ಪೊಲೀಸ್ ಠಾಣೆಗೆ ನುಗ್ಗಿ ದಾಂದಲೆ ಮಾಡಿದ ವಕೀಲರ ಬಂಧನ ಆಗಲೇಬೇಕು, ಗೂಂಡಾ ವರ್ತನೆ ತೋರಿದ ವಕೀಲರನ್ನು ಬಾರ್ ಕೌನ್ಸಿಲ್‌ನಿಂದ ಕೈಬಿಡಬೇಕು ಎಂದು ಪೊಲೀಸರು ಅಗ್ರಹಿಸಿದ್ದಾರೆ.
ನ್ಯಾಯ ಸಿಗುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ. ಜಿಲ್ಲೆಯಿಂದ ಎಲ್ಲಾ ಪೊಲೀಸರು ಇಲ್ಲಿಗೆ ಆಗಮಿಸಲಿ.ನ್ಯಾಯ ಸಿಗುವ ವರೆಗೂ ಪ್ರತಿಭಟನೆ ಕೈಬಿಡಲ್ಲ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಈ ಹಿಂದೆ ಕರ್ತವ್ಯ ನಿರ್ವಹಿಸಿದ ಐಎಎಸ್ ಅಧಿಕಾರಿ ಅಣ್ಣಾಮಲೈ ನೆನೆದಿದ್ದಾರೆ. ಅಣ್ಣಾಮಲೈ ಸಾಹೇಬ್ರು ಇದ್ದಾಗ ಎಲ್ಲಾ ಚೆನ್ನಾಗಿತ್ತು ಎಂದಿದ್ದಾರೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ