ಪೋಲಿಯೊ ಲಸಿಕೆ ಬದಲಿಗೆ ಸ್ಯಾನಿಟೈಸರ್ ಹನಿ ಹಾಕಿದ ಆರೋಗ್ಯ ಕಾರ್ಯಕರ್ತರು 12ಮಕ್ಕಳು ಅಸ್ವಸ್ಥ!

ಮಹಾರಾಷ್ಟ್ರ: ಮಹಾರಾಷ್ಟ್ರದ ಯವತ್ಮಾಲ್ ನಲ್ಲಿ ಸೋಮವಾರ ಪೋಲಿಯೊ ಲಸಿಕೆ ಬದಲಿಗೆ ಸ್ಯಾನಿಟೈಸರ್ ಹನಿಗಳನ್ನು ನೀಡಿದ ನಂತರ ಐದು ವರ್ಷದೊಳಗಿನ 12 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಯವತ್ಮಾಲ್ ಜಿಲ್ಲಾ ಕೌನ್ಸಿಲ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕೃಷ್ಣ ಪಂಚಲ್  ಈ ಕುರಿತು ಮಾಹಿತಿಯನ್ನು ನೀಡಿದ್ದು, ಈಗ ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.  ಮತ್ತು ಘಟನೆಗೆ ಸಂಬಂಧಿಸಿದಂತೆ ಆರೋಗ್ಯ ಕಾರ್ಯಕರ್ತ, ವೈದ್ಯ, ಮತ್ತು ಆಶಾ ಕಾರ್ಯಕರ್ತ ಸೇರಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

READ ALSO