ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಶ್ರೀ ಬಾಲಕೃಷ್ಣ ಗೌಡ ಅವರು ಆಗಸ್ಟ್ 1, 2026ರಂದು ರಾತ್ರಿ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಶಾಸಕ ಶ್ರೀ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ವೇಳೆ ಸರ್ಕಾರದಿಂದ ಒಟ್ಟು ರೂ.20 ಲಕ್ಷ ಪರಿಹಾರ ಮಂಜೂರು ಮಾಡುವ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿದ ಅವರು, ಪ್ರಥಮ ಹಂತವಾಗಿ ರೂ.5 ಲಕ್ಷ ಪರಿಹಾರದ ಚೆಕ್ ಅನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಿದರು. ಉಳಿದ ರೂ.15 ಲಕ್ಷವನ್ನು ಮೃತರ ವಾರೀಸುದಾರರ ಬ್ಯಾಂಕ್ ಖಾತೆಗೆ ಶೀಘ್ರ ಜಮಾ ಮಾಡುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ (DFO) ರವಿಶಂಕರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಸುಬ್ಬಯ್ಯ ನಾಯ್ಕ, ವಲಯ ಅರಣ್ಯಾಧಿಕಾರಿ (RFO), ತಹಶೀಲ್ದಾರ್ ಎಸ್.ಎನ್. ನರಗುಂದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಮೃತರ ಕುಟುಂಬಕ್ಕೆ ದೊರೆಯಬೇಕಾದ ಎಲ್ಲಾ ಸರ್ಕಾರಿ ನೆರವು ಹಾಗೂ ಸೌಲಭ್ಯಗಳನ್ನು ವಿಳಂಬವಿಲ್ಲದೆ ಒದಗಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಶ್ರೀ ಹರೀಶ್ ಪೂಂಜ ನಿರ್ದೇಶನ ನೀಡಿದರು.

Spread the love
  • Related Posts

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    ಧರ್ಮಸ್ಥಳ : ( ಆಗಸ್ಟ್ 14) ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2 ,ಶಾಲೆಯಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಯುತ ಕೆ .ನಂದ ಇವರು ತುಳು…

    Spread the love

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಆರಾಧಿಸಲ್ಪಟ್ಟ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 10 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 19 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 10 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 14 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 11 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 16 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ