ವಿಚಾರಣೆ ನೆಪದಲ್ಲಿ ಶಾಸಕರನ್ನು ವಶ ಪಡಿಸಿಕೊಳ್ಳಲು ಬಂದ ಪೋಲೀಸ್ ಅಧಿಕಾರಿಗಳು ಬರಿಗೈಯಲ್ಲಿ ವಾಪಾಸು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜ ಬಂಧನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೆಎಸ್ಆರ್ ಪಿ ತುಕಡಿಯೊಂದಿಗೆ ಬಂದಿದ್ದ ಪೋಲೀಸ್ ಅಧಿಕಾರಿಗಳ ತಂಡ ಶಾಸಕರಿಗೆ ಎರಡು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸಿ ಬರಿಗೈಯಲ್ಲಿ ಹಿಂದಿರುಗಿದ್ದಾರೆ.

ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ ಬಂಧನಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜ ಪೊಲೀಸರ ನಡುವೆ ಉಂಟಾದ ಮಾತಿನ ಚಕಮಕಿ ಹಾಗೂ ಪ್ರತಿಭಟನೆಗೆ ಸಂಬಂಧಿಸಿದಂತೆ ದಾಖಲಾದ ಎರಡು ಪ್ರಕರಣಗಳ ವಿಚಾರವಾಗಿ ಇಂದು ಬೆಳಗ್ಗಿನಿಂದ ಸಂಜೆಯವರೆಗೆ ಶಾಸಕರ ಬಂಧನಕ್ಕೆ ಪೊಲೀಸರ ತಂಡ ಬೀಡು ಬಿಟ್ಟಿದ್ದು ನ್ಯಾಯವಾದಿಗಳ ನಡುವೆ ದಿನಪೂರ್ತಿ ಮಾತುಕತೆ ನಡೆದ ಬಳಿಕ ಶಾಸಕರ ಬಂಧಿಸಿಯೇ ಸಿದ್ದ ಎಂಬ ವಾತಾವರಣವನ್ನು ಪೊಲೀಸರು ಸೃಷ್ಟಿಸಿದ್ದರು.

ನಾಲ್ಕು ಕೆ.ಎಸ್.ಆರ್.ಪಿ. ತಯಕಡಿಯ ಸಹಿತ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಎಸ್.ಐ., ವೃತ್ತ ನಿರೀಕ್ಷಕರನ್ನು ನಿಯೋಜಿಸಲಾಗಿತ್ತು. ಸಂಜೆಯ ವೇಳೆಗೆ ಬಂಧನಕ್ಕೆ ಯತ್ನಿಸಿದ ಪೊಲೀಸರನ್ನು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದ ಕಾರ್ಯಕರ್ತರು ತಡೆದು ಘರ್ಷಣೆ ಏರ್ಪಡುವ ಸಂದರ್ಭ ಬಂದೊದಗಿತ್ತು. ತಕ್ಷಣ ಸಂಸದ ನಳಿನ್‌ ಕುಮಾರ್ ಕಟೀಲ್ ಪೊಲೀಸರೆಡೆಗೆ ಬಂದು ತನ್ನನ್ನು ಬಂಧಿಸುವಂತೆ ಕೇಳಿಕೊಂಡರು. ಬಳಿಕ‌ ಡಿವೈಎಸ್ ಪಿ ಹಾಗೂ ವೃತ್ತ ನಿರೀಕ್ಷಕರಿಗೆ ಮನೆ ಒಳಗೆ ಬರಲು ಅವಕಾಶ ಕೋರಿದಂತೆ ಶಾಸಕ ಹರೀಶ್ ಪೂಂಜ ಕಾರ್ಯಕರ್ತರಲ್ಲಿ ವಿನಂತಿಸಿದರು. ಬಳಿಕ ಪೊಲೀಸರು ಶಾಸಕರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟೀಸ್ ನೀಡಿ ಬರಿಗೈಯಲ್ಲಿ ವಾಪಸ್ಸಾದರು.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರವು ರಾಜ್ಯದ ವಿವಿಧ ಭಾಗಗಳಲ್ಲಿ ನೂತನ 12 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಸಾರ್ವಜನಿಕರ ಭದ್ರತೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಸೇವೆಗಳನ್ನು ಜನರಿಗೆ ಇನ್ನಷ್ಟು ಸಮೀಪಕ್ಕೆ ತಲುಪಿಸಲು ಈ ಕ್ರಮ…

    Spread the love

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 8 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 14 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 39 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 52 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 17 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್