ಅಧಿಕಾರಿಗಳು ನೋಡ ನೋಡುತಿದ್ದಂತೆಯೇ ಕೊರೋನಾ ಸೋಂಕಿತ ಮಹಿಳೆ ಬೈಕ್ ಏರಿ ಎಸ್ಕೇಪ್!

ಮೈಸೂರು: ಜಿಲ್ಲೆಯಲ್ಲಿ ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮೈಸೂರು ನಗರದ ಎನ್ ಆರ್ ಮೊಹಲ್ಲಾದಲ್ಲಿ ಇಂದು ಇಂದು ಕೊರೊನಾ ರೆಂಡಮ್ ಟೆಸ್ಟ್ ನಡೆಸಲಾಗಿತ್ತು.

ಈ ಸಂದರ್ಭದಲ್ಲಿ ಓರ್ವ ಮಹಿಳೆಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಕುರಿತು ಪರೀಕ್ಷೆ ಮಾಡಿದ ಅಧಿಕಾರಿಗಳು ನಿಮಗೆ ಕೊರೋನಾ ಪಾಸಿಟಿವ್ ಎಂದು ಹೇಳಿದ್ದಾರೆ. ಇದರಿಂದ ಆತಂಕಕ್ಕೆ ಒಳಗಾದ ಮಹಿಳೆ ಏಕಾಏಕಿಯಾಗಿ ಬೈಕ್ ಏರಿ ಪರಾರಿಯಾಗಿದ್ದಾಳೆ ಎಂದು ತಿಳಿದು ಬಂದಿದೆ.

READ ALSO

ಐಸೋಲೇಷನ್ ಆಗದಿದ್ರೆ ಪ್ರಕರಣ ದಾಖಲಿಸಲಾಗುತ್ತದೆ. ಎಲ್ಲಿಗೂ ಹೋಗಬೇಡಿ ಎಂದು ಅಧಿಕಾರಿಗಳು ಮನವಿ ಮಾಡಿಕೊಂಡರೂ ಮಹಿಳೆ ಬೈಕ್ ಏರಿ ಎಸ್ಕೇಪ್ ಆಗಿದ್ದಾಳೆ. ಹೀಗಾಗಿ ಜಿಲ್ಲಾಡಳಿತಕ್ಕೆ ಈ ಮಹಿಳೆಯ ಕೊರೊನಾ ಪಾಸಿಟಿವ್ ಪ್ರಕರಣ ದೊಡ್ಡ ತಲೆ ನೋವಾಗಿದೆ ಎನ್ನಲಾಗಿದೆ.

ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA