ಕೊರೋನಾ ಪಾಸಿಟಿವ್ ಬಂದ ಯುವತಿಯನ್ನು 13 ದಿನಗಳ ಕಾಲ ಗ್ರಾಮದಿಂದ ಹೊರಗಿಟ್ಟ ಗ್ರಾಮಸ್ಥರು!

ಹೈದರಾಬಾದ್​: ಮಹಾಮಾರಿ ಕರೊನಾ ವೈರಸ್​ ಸೋಂಕು ಬಂದ ಮಾತ್ರಕ್ಕೆ ಅಂತಹ ವ್ಯಕ್ತಿಯನ್ನು ಯಾರು ಸಹ ಅತ್ಯಂತ ಕೀಳಾಗಿ ನೋಡಬಾರದು. ಸಾಮಾನ್ಯರಂತೆಯೇ ಅವರೊಬ್ಬ ರೋಗಿಯೇ ಹೊರತು ತೀರ ಬೇಡವಾದವರು ಎಂಬಂತೆ ನೋಡಬಾರದು ಎಂದು ಎಷ್ಟೇ ಅರಿವು ಮೂಡಿಸಿದರು ಅಂತಹ ಕಹಿ ಘಟನೆಗಳು ಮರುಕಳಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯೇ ಸರಿ.

ಕರೊನಾ ಸೋಂಕು ಬಂದಿದ್ದಕ್ಕೆ ಪಿಯು ವಿದ್ಯಾರ್ಥಿನಿಯೊಬ್ಬಳನ್ನು ಸುಮಾರು 13 ದಿನಗಳ ಕಾಲ ಬಲವಂತವಾಗಿ ಊರಿನಿಂದ ಹೊರಹಾಕಿದ್ದು, ಟೆಂಟ್​ನಲ್ಲಿ ಪ್ರತ್ಯೇಕವಾಗಿ ವಾಸಿಸುವಂತೆ ಗ್ರಾಮಸ್ಥರು ಒತ್ತಾಯ ಮಾಡಿರುವ ಘಟನೆ ತೆಲಂಗಾಣದ ಆದಿಲ್​ಬಾದ್​ ಜಿಲ್ಲೆಯಲ್ಲಿ ನಡೆದಿದೆ.

ಘಟನೆ ಬಗ್ಗೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಜಿ. ಕಿಸನ್​ ರೆಡ್ಡಿ ಅವರು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ವೈದ್ಯಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದರು. ಅಲ್ಲದೆ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತೆಲಂಗಾಣ ಡಿಜಿಪಿ ಮತ್ತು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೆ ಕೇಂದ್ರ ಸಚಿವರು ಸೂಚನೆ ನೀಡಿದ್ದಾರೆ.

ಕೋವಿಡ್​ ರೋಗಿಗಳನ್ನು ಬಹಿಷ್ಕರಿಸುವುದು ಅಮಾನವೀಯ. ಕರೊನಾ ವಿರುದ್ಧ ಹೋರಾಡುವಾಗ ಒಬ್ಬರಿಗೊಬ್ಬರು ಸಹಕಾರ ನೀಡಿ, ಮುಂದೆ ಸಾಗಬೇಕು. ಕರೊನಾ ಬಂದಿದ್ದಕ್ಕೆ ಹುಡುಗಿಯನ್ನು ಹೊರಹಾಕಿದ ಘಟನೆ ದುರಾದೃಷ್ಟಕರ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ತೆಲಂಗಾಣ ಡಿಜಿಪಿ ಮತ್ತು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೆ ಸೂಚನೆ ನೀಡಿದ್ದೇನೆಂದು ಕಿಸನ್​ ರೆಡ್ಡಿ ಅವರು ಟ್ವೀಟ್​ ಮಾಡಿದ್ದಾರೆ.

ಕರೊನಾ ಪಾಸಿಟಿವ್​ ಆಗಿದ್ದಕ್ಕೆ ನಿರ್ಮಲ್​ ಜಿಲ್ಲೆಯ ಮುಧೋಳ್​ನಲ್ಲಿರುವ ತೆಲಂಗಾಣ ಬುಡಕಟ್ಟು ಕಲ್ಯಾಣ ವಸತಿ ಕಾಲೇಜಿನಿಂದ ಸಲೆಗುಡ ಗ್ರಾಮದ ತನ್ನ ಮನೆಗೆ ಮಾರ್ಚ್​ 19ರಂದು ಹುಡುಗಿ ವಾಪಸಾದಾಗ ಗ್ರಾಮಸ್ಥರು ಆಕೆಗೆ ಅನುಮತಿ ನೀಡಲಿಲ್ಲ. ಇತರರಿಗೆ ಸೋಂಕು ಅಂಟಿಸಿಬಿಡುತ್ತಾಳೆ ಎಂಬ ಭಯದಿಂದ ಹುಡುಗಿಗೆ ಗ್ರಾಮದ ಒಳಗೆ ಬರಲು ಅನುಮತಿಯನ್ನೇ ನೀಡಲಿಲ್ಲ.

ಆದಾಗ್ಯು, ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳು, ಗ್ರಾಮಸ್ಥರಿಂದ ಯಾವುದೇ ಒತ್ತಾಯವಿಲ್ಲದೆ ಹುಡುಗಿ ಸ್ವಯಂಪ್ರೇರಣೆಯಿಂದ ಪ್ರತ್ಯೇಕತೆವಾಗಿದ್ದಾಳೆ ಅಂದುಕೊಂಡರು. ಮಂಗಳವಾರ ಎರಡನೇ ಪರೀಕ್ಷೆ ನಡೆಸಿದ ಅಧಿಕಾರಿಗಳು ಹುಡುಗಿಗೆ ನೆಗಿಟಿವ್​ ವರದಿ ಬಂದಾಗ ಮನೆಗೆ ಕಳುಹಿಸಿಕೊಡಲಾಯಿತು.

ಈ ವಿಚಾರದಲ್ಲಿ ಪರ-ವಿರೋಧ ಚರ್ಚೆಗಳು ಸಹ ಕೇಳಿಬರುತ್ತಿದೆ. ಕೆಲವರು ಸ್ವತಃ ಹುಡುಗಿಯೇ ಪ್ರತ್ಯೇಕವಾಗಿದ್ದಳು. ಗ್ರಾಮಸ್ಥರು ಸಹ ಕಾಲ ಕಾಲಕ್ಕೆ ಆಹಾರ ನೀಡುವ ಮೂಲಕ ಸಹಕಾರ ನೀಡಿದ್ದಾರೆ ಎಂದು ಕೆಲ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ. ಆದರೆ, 13 ದಿನಗಳ ಕಾಲ ಯುವತಿಯನ್ನು ಏಕಾಂಗಿಯಾಗಿ ಊರಿನ ಹೊರಭಾಗದಲ್ಲಿ ಇರಿಸಿದ್ದು ಸರಿಯಲ್ಲ ಎಂದು ಅನೇಕರು ಅಸಮಾಧಾನ ಹೊರಹಾಕಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ