ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ಪ.ಗೋ. ಪ್ರಶಸ್ತಿಯನ್ನು ಪತ್ರಕರ್ತ ಪ್ರದೀಶ್.ಎಚ್.ಮರೋಡಿ ಯವರಿಗೆ ಮಂಗಳೂರು ವಿ.ವಿ.ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯರವರು ಪ್ರಶಸ್ತಿ ಪ್ರದಾನ ಮಾಡಿದರು.
ಯಾವುದೇ ಆಮಿಷಕ್ಕೆ ಬಲಿಯಾಗದೇ ವಿಶ್ವಾಸರ್ಹತೆಯನ್ನು ಉಳಿಸಿಕೊಂಡು ಪತ್ರಕರ್ತರು ಕಾರ್ಯನಿರ್ವಹಿಸಬೇಕು. ವಿಶ್ವಾಸಾರ್ಹತೆಯೇ ಪತ್ರಕರ್ತರಿಗೆ ಜೀವಾಳ, ಪತ್ರಕರ್ತರು ಮಾಡುವ ಪ್ರತಿಯೊಂದು ವರದಿಗಳು ನಂಬಿಕೆ ಮತ್ತು ವಿಶ್ವಾಸದಿಂದ ಕೂಡಿರಬೇಕು. ಪ.ಗೊ ಅವರು ಪತ್ರಕರ್ತರಿಗೆ ಆದರ್ಶಪ್ರಾಯರಾಗಿದ್ದರು. ಅವರ ಹೆಸರಿನಲ್ಲಿ ನೀಡುವ ಈ ಪ್ರಶಸ್ತಿ ಗ್ರಾಮೀಣ ಬದುಕಿನ ಬಗ್ಗೆ ಕನ್ನಡಿ ಹಿಡಿಯಲು ಪತ್ರಕರ್ತರಿಗೆ ಪ್ರೇರಣೆಯಾಗಲಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ ವಿಭಿನ್ನವಾಗಿ ಮತ್ತು ಸಮಾಜಮುಖಿಯಾಗಿ ಕೆಲಸ ಮಾಡುತ್ತಿದೆ ಎಂದು ಅವರು ಶ್ಲಾಘಿಸಿದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರದೀಶ್.ಎಚ್.ಮರೋಡಿ ಪ.ಗೋ ಅವರ ಹೆಸರಿನಲ್ಲಿ ನೀಡುವ ಪ್ರಶಸ್ತಿ ಪಡೆದಿರುವುದು ಜೀವನದ ಅವಿಸ್ಮರಣೀಯ ಕ್ಷಣ ಎಂದು ಹೇಳಿದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪಿಡಬ್ಲ್ಯುಡಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರ ಶೇಖರಯ್ಯ ಭಾಗವಹಿಸಿದ್ದರು.
ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾದ ಪುತ್ತೂರು ಡಾ.ಶಿವರಾಮ ಕಾರಂತರ ಬಾಲವನದ ವಿಶೇಷ ಕರ್ತವ್ಯಾಧಿಕಾರಿ ಡಾ.ಸುಂದರ ಕೇನಾಜೆ, ಮತ್ತು ಮಂಗಳೂರು ವಿವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಡಾ.ಸೌಮ್ಯ ಕೆ.ಬಿ. ಮಾತನಾಡಿದರು. ಪದ್ಯಾಣ ರಾಮಚಂದ್ರ ಉಪಸ್ಥಿತರಿದ್ದರು.