ಕುಲಪತಿ ಹುದ್ದೆ ಕೊಡಿಸುತ್ತೇನೆಂದು ಹೇಳಿ ವಂಚಿಸಿದ ಆರೋಪ ರಾಮಸೇನೆಯ ಸಂಸ್ಥಾಪಕ ಪ್ರಸಾದ ಅತ್ತಾವರ ಬಂಧನ

ಮಂಗಳೂರು:  ಮಂಗಳೂರು  ವಿವಿಯಲ್ಲಿ ಕುಲಪತಿ ಸ್ಥಾನ ಕೊಡಿಸುತ್ತೇನೆಂದು ಹೇಳಿ ಮೋಸ ಮಾಡಿದ ಪ್ರಕರಣಕ್ಕ ಸಂಬಂಧಪಟ್ಟಂತೆ ರಾಮಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ ವಿರುದ್ಧ ಕೇಸ್ ದಾಖಲಾಗಿತ್ತು. ಮಂಗಳೂರು ಅಥವಾ ರಾಯಚೂರು ವಿವಿಯಲ್ಲಿ ಕುಲಪತಿ ಸ್ಥಾನ ಕೊಡಿಸುವ ಆಮಿಷವೊಡ್ಡಿ ವಂಚಿಸಿದ್ದಾರೆ ಎಂದು ದೂರು ದಾಖಲಾಗಿತ್ತು.

ಪ್ರಸಾದ್  ಅತ್ತಾವರ್  ವಿವಿಯಲ್ಲಿ ಕುಲಪತಿ ಸ್ಥಾನ ಕೊಡಿಸುವುದಾಗಿ ಹೇಳಿ 17.5 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದರು ಅನ್ನೋ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  ಮಂಗಳೂರು ವಿವಿಯಲ್ಲಿ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ವಿವೇಕ್ ಆಚಾರ್ಯ ಅವರು ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಪ್ರಸಾದ್ ಅತ್ತಾವರ್ ಅವರನ್ನು ಬಂಧಿಸಿದ್ದಾರೆ,

READ ALSO