ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ ಗಂಭೀರ ಅಪರಾಧ ಪತ್ತೆ ಪ್ರಕರಣಗಳಲ್ಲಿ ಪರಿಣಾಮಕಾರಿ ಕರ್ತವ್ಯ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಭೀರ ಪ್ರಕರಣ ನಡೆದರೂ ವಿಶೇಷ ಪೊಲೀಸ್ ತಂಡದ ಜೊತೆಗೆ ಇದ್ದು ಹಿರಿಯ ಅಧಿಕಾರಿಗಳು ಹೇಳಿದಂತೆ ಕರ್ತವ್ಯ ನಿರ್ವಹಿಸಿ ಭೇದಿಸುವ ಪೊಲೀಸ್ ಹೆಡ್ ಕಾನ್ಟೇಬಲ್ ಮೂರುಗೋಳಿಯ ಪ್ರವೀಣ್.ಎಂ ಇವರಿಗೆ ಈ ಭಾರಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು, ಎಪ್ರಿಲ್ 2 ರಂದು ಕರ್ನಾಟಕ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪದಕ ಪ್ರದಾನ ಮಾಡಿದರು.ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಮೂರುಗೋಳಿ ನಿವಾಸಿ ಅಣ್ಣು ದೇವಾಡಿಗ ಮತ್ತು ಬೇಬಿ ದೇವಾಡಿಗರ ಪ್ರಥಮ ಪುತ್ರ ಪ್ರವೀಣ್.ಎಂ ಅವರು 2002 ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡರು. ಮೊದಲ ಕರ್ತವ್ಯವನ್ನು ಮಂಗಳೂರು ಬಂದರು ಪೊಲೀಸ್ ಠಾಣೆಯಲ್ಲಿ ಸಲ್ಲಿಸಿದ್ದು, ಬಳಿಕ ಬೆಳ್ತಂಗಡಿ ವೃತ್ತ ಕಚೇರಿ, ದಕ್ಷಿಣ ಕನ್ನಡ ಜಿಲ್ಲಾ ಅಪರಾಧ ಪತ್ತೆ ದಳ(DCIB) , ಬಂಟ್ವಾಳ ಡಿವೈಎಸ್ಪಿ ವಿಶೇಷ ಅಪರಾಧ ದಳ , ವೇಣೂರು ಪೊಲೀಸ್ ಠಾಣೆ, ಸದ್ಯ ಈಗ ದಕ್ಷಿಣ ಕನ್ನಡ ಸೈಬರ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

NIA ಅಧಿಕಾರಿಗಳ ಜೊತೆ ಕರ್ತವ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಸಂದರ್ಭದಲ್ಲಿ NIA ತನಿಖಾ ದಳದೊಂದಿಗೆ 6 ತಿಂಗಳು ಕರ್ತವ್ಯ ನಿರ್ವಹಿಸುತ್ತಿದ್ದು. ಬಳಿಕ ಬಿಹಾರದಲ್ಲಿ ಮೋದಿ ಹತ್ಯೆ ಯತ್ನ ಪ್ರಕರಣದಲ್ಲಿ NIA ಜೊತೆ 3 ತಿಂಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ನಡುವೆ ಎರಡು ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ(NIA) ಜೊತೆಗೆ ಕರ್ತವ್ಯ ನಿರ್ವಹಿಸಿದ್ದಾರೆ.*ಹಲವು ಗಂಭೀರ ಪ್ರಕರಣದಲ್ಲಿ ದಕ್ಷತೆಯಿಂದ ಸೇವೆ* ಶರತ್ ಮಾಡಿವಾಳ ಹತ್ಯೆ ಪ್ರಕರಣ, ಫರಂಗಿಪೇಟೆ ಡಬಲ್ ಮರ್ಡರ್, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, 9 ದೇವಾಲಯ ಕಳವು ಪ್ರಕರಣ, ಬೆಳ್ತಂಗಡಿ ಬಂಗಾಡಿ ಬಸದಿ ಸೇರಿ 9 ದೇವಾಲಯ ಕಳ್ಳತನ ಪ್ರಕರಣ,ವಿಟ್ಲ ಕರ್ನಾಟಕ ಬ್ಯಾಂಕ್ ದರೋಡೆ, ಪುತ್ತೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ನಡೆದ ದರೋಡೆ, ವಗ್ಗ ಮನೆ ದರೋಡೆ ಪ್ರಕರಣ, ವಿಟ್ಲ ಸಿಂಗಾರಿ ಬೀಡಿ ನಕಲಿ ಇಡಿ ಅಧಿಕಾರಿಗಳ ಸೋಗಿನಲ್ಲಿ ದರೋಡೆ, ಫರಂಗಿಪೇಟೆ ದಿಗಂತ್ ನಾಪತ್ತೆ ಪ್ರಕರಣ ಹಾಗೂ ಇನ್ನಿತರ ಗಂಭೀರ ಪ್ರಕರಣದಲ್ಲಿ ವಿಶೇಷ ತಂಡದ ಜೊತೆ ಪ್ರಮುಖ ಪಾತ್ರವನ್ನು ವಹಿಸಿ ಪ್ರಕರಣ ಭೇದಿಸಿ ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ನಗದು ಪುರಸ್ಕಾರ& ಪ್ರಶಸ್ತಿ: ಪ್ರವೀಣ್ ಅಪರಾಧ ಪತ್ತೆ ಪ್ರಕರಣದ ಕರ್ತವ್ಯಕ್ಕೆ ಸುಮಾರು 57 ನಗದು ಪುರಸ್ಕಾರ ಬಹುಮಾನ ಹಾಗೂ ಇತರ ಪ್ರಶಸ್ತಿ ಲಭಿಸಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ