TRENDING
Next
Prev

ಗರ್ಭಿಣಿಯರಿಗೆ ಸೂಕ್ತ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ: ಉಸ್ತುವಾರಿ ಸಚಿವ ಕೋಟ ಎಚ್ಚರಿಕೆ!

ಮಂಗಳೂರು: ಜಿಲ್ಲೆಯಲ್ಲಿ ಗರ್ಭಿಣಿಯರಿಗೆ ಚಿಕಿತ್ಸೆ ನೀಡುವಲ್ಲಿ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಕೊರೋನಾ ಸೋಂಕು ನೆಪ ಒಡ್ಡಿ ನಿರಾಕರಿಸುತ್ತಿವೆ ಎಂಬ ಆರೋಪ ಬಂದ ಹಿನ್ನಲೆಯಲ್ಲಿ ಆಸ್ಪತ್ರೆಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.

ನೆಲ್ಯಾಡಿಯ ಗರ್ಭಿಣಿಯೊಬ್ಬರನ್ನು ಜ್ವರದ ಚಿಕಿತ್ಸೆಗಾಗಿ ದಿನಪೂರ್ತಿ ಅಲೆದಾಡಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಘಟನೆಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿಯವರಿಗೆ ಆದೇಶಿಸಿದ್ದಾರೆ.

READ ALSO

ಸಕಾಲಕ್ಕೆ ಮಹಿಳೆಗೆ ಚಿಕಿತ್ಸೆ ನೀಡಲು ವಿಳಂಬ ಮಾಡಿದ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಅಗತ್ಯ ಬಿದ್ದರೆ ಅಂತಹವರನ್ನು ಸೇವೆಯಿಂದ ಅಮಾನತು ಮಾಡಲು ಹಿಂಜರಿಯುವುದಿಲ್ಲ. ನೆಲ್ಯಾಡಿಯ ಮಹಿಳೆಗೆ ಕೂಡಲೇ ಅಗತ್ಯ ಚಿಕಿತ್ಸೆ ಒದಗಿಸಿ ಎಂದು ಸೂಚಿಸಿದ್ದಾರೆ .