“ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ

ಸೋಮಂತಡ್ಕ: ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅಳವಡಿಸಲಾಗಿರುವ ದಾರಿದೀಪಗಳು ಕೆಲ ದಿನಗಳಿಂದ ಸಂಜೆಯಾಗುತ್ತಿದ್ದಂತೆ ನಗರಕ್ಕೆ ಅಲಂಕಾರ ಮಾಡಿದಂತೆ ಬೆಳಕು ಚೆಲ್ಲುತ್ತಿದ್ದವು. ಆದರೆ ಇದೀಗ ಸೋಮಂತಡ್ಕ ಪೇಟೆಯ ಒಂದು ಬದಿಯ ದಾರಿದೀಪಗಳು ಬೆಳಗದೆ ಕತ್ತಲು ಆವರಿಸಿದ್ದು, ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ.

ಮೊಬೈಲ್‌ಗಷ್ಟೇ ಅಲ್ಲ, ಹೆದ್ದಾರಿ ದಾರಿದೀಪಕ್ಕೂ ರೀಚಾರ್ಜ್!

ಈ ದಾರಿದೀಪಗಳಿಗೆ ಪ್ರೀ-ಪೇಯ್ಡ್ ಸ್ಮಾರ್ಟ್ ಮೀಟರ್ ಅಳವಡಿಸಲಾಗಿದ್ದು, ಮೊಬೈಲ್ ರೀಚಾರ್ಜ್ ಮಾಡುವ ರೀತಿಯಲ್ಲೇ ಮುಂಗಡ ಹಣ ಪಾವತಿಸಿ ವಿದ್ಯುತ್ ಬಳಕೆ ಮಾಡಬೇಕಾಗಿದೆ. ಕಳೆದ ಕೆಲ ದಿನಗಳಿಂದ ರೀಚಾರ್ಜ್ ಅವಧಿ ಮುಗಿದಿರುವ ಕಾರಣ ದಾರಿದೀಪಗಳ ಸಾಲು ಬೆಳಗುತ್ತಿಲ್ಲ ಎನ್ನಲಾಗಿದೆ.

ಈ ಸಮಸ್ಯೆಗೆ ಪರಿಹಾರವಾಗಿ ಪೋಸ್ಟ್-ಪೇಯ್ಡ್ ಸ್ಮಾರ್ಟ್ ಮೀಟರ್ ಅಳವಡಿಸುವಂತೆ ಸಂಬಂಧಪಟ್ಟ ಇಲಾಖೆಯವರು ಮೆಸ್ಕಾಂಗೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ದಾರಿದೀಪಗಳ ನಿರ್ವಹಣೆಯ ಹೊಣೆ ಹೊತ್ತವರಿಗೆ ಆಗಾಗ ರೀಚಾರ್ಜ್ ಮಾಡುವ ತಲೆನೋವು ಒಂದೆಡೆಯಾದರೆ, ಮತ್ತೊಂದೆಡೆ ಸಂಜೆಯ ವೇಳೆಯಲ್ಲಿ ಕತ್ತಲಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ದಾರಿಹೋಕರಿಗೆ ಮತ್ತು ವಾಹನ ಸವಾರರಿಗೆ ತೊಂದರೆ ಉಂಟುಮಾಡುತ್ತಿದೆ.

ಸಮಸ್ಯೆ ಶೀಘ್ರವೇ ಬಗೆಹರಿಸಿ ದಾರಿದೀಪಗಳನ್ನು ಮತ್ತೆ ಬೆಳಗಿಸುವಂತೆ ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

Spread the love
  • Related Posts

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ನವದೆಹಲಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಾಲಿ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿಯು ತೆರೆಕಂಡಿದ್ದು, ರಾಜ್ಯ ರಾಜಭವನಕ್ಕೆ ಹೊಸ ಮುಖ್ಯಸ್ಥರ ಆಗಮನವಾಗಲಿದೆ. ಕರ್ನಾಟಕ ಸೇರಿದಂತೆ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಬೆಳ್ತಂಗಡಿ : ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ‘2025-2026ರ ಸಾಲಿನ ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ…

    Spread the love

    You Missed

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    • By admin
    • October 12, 2026
    • 4 views
    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 5 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 7 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 10 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 11 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 14 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!