ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಬ್ಲಾಕ್ ತೆರೆದಲ್ಲಿ ಇತರ ರೋಗಿಗಳು ಆತಂಕದಲ್ಲಿ ಬದುಕ ಬೇಕಾಗುತ್ತದೆ: ಹರೀಶ್ ಕುಮಾರ್


ಮಂಗಳೂರು:
 ಕೋವಿಡ್ ಸೋಂಕು ಅಧಿಕಗೊಳ್ಳುತ್ತಿರುವುದರಿಂದ ನಗರದ ಖಾಸಗಿ ಆಸ್ಪತ್ರೆಗಳನ್ನು ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡು ಮಾಡಲಾಗುತ್ತಿದೆ. ಇಲ್ಲಿ ಒಂದು ಬ್ಲಾಕ್​​ನ್ನು ಕೋವಿಡ್ ವಿಭಾಗವಾಗಿ ಮಾಡಲಾಗುತ್ತಿದೆ. ಇದರಿಂದ ಇತರ ರೋಗಿಗಳು ಆತಂಕದಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು.

ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಇದಕ್ಕಿಂತ ಜಿಲ್ಲಾಡಳಿತ ನಗರದ ಕೆಲವೊಂದು ಖಾಸಗಿ ಆಸ್ಪತ್ರೆಗಳನ್ನು ಜಿಲ್ಲಾಡಳಿದ ವಶಕ್ಕೆ ಪಡೆದು ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡು ಮಾಡಿದರೆ ಉತ್ತಮ. ವೆನ್​​ಲಾಕ್ ಆಸ್ಪತ್ರೆಯು ಹಿಂದಿನಂತೆ ಕಾರ್ಯ ನಿರ್ವಹಿಸಿದಲ್ಲಿ ಸರ್ಕಾರಿ ಆಸ್ಪತ್ರೆಗಳಿಲ್ಲದೆ ಜನರು ಪರದಾಡುವುದು ತಪ್ಪುತ್ತದೆ. ಇದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಕಾರ್ಯಗತಗೊಳಿಸಲಿ ಎಂದು ಹೇಳಿದರು.

READ ALSO