ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಬಳಿ ಇಂದು ಬೆಳಿಗ್ಗೆ ನಡೆದಿದೆ.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಲಾವತ್ತಡ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬಲಬದಿಯ ಕಮರಿಗೆ ಬಿದ್ದಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.