ಖಾಸಗಿ ದೇಗುಲಗಳನ್ನು ಸರ್ಕಾರ ವಶಪಡಿಸಿಕೊಳ್ಳುವುದಿಲ್ಲ: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಖಾಸಗಿ ದೇಗುಲಗಳಿಗೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಿಂದ ನೀಡಲಾಗಿರುವ ಸುತ್ತೋಲೆಯ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಖಾಸಗಿ ದೇವಾಲಯಗಳನ್ನು ವಶಪಡಿಸಿಕೊಳ್ಳುವ ಚಿಂತನೆ ಸರ್ಕಾರಕ್ಕಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ.

ಈ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದೇವಾಲಯಗಳನ್ನು ನೋಂದಾವಣೆ ಮಾಡಿಕೊಳ್ಳಬೇಕು ಎಂದು 2019 ರಲ್ಲಿಯೇ ಧಾರ್ಮಿಕ ದತ್ತಿ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇದು ಸರ್ಕಾರದ ವಶಕ್ಕೆ ಖಾಸಗಿ ದೇಗುಲಗಳನ್ನು ಒಳಪಡಿಸುವ ಉದ್ದೇಶದಿಂದಲ್ಲಿ. ಹಾಗೆಯೇ ಖಾಸಗಿ ದೇಗುಲಗಳ ಮೇಲೆ ಸರ್ಕಾರ ನಿಗಾ ವಹಿಸಲಿದೆ ಎಂಬ ಆತಂಕವೂ ಬೇಡ. ಈ ಸುತ್ತೋಲೆ ನೋಂದಣಿ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ದೇಗುಲಗಳಿಗೆ ನೆನಪಿಸಿಕೊಡುವ ಹಿನ್ನೆಲೆಯಲ್ಲಿ ಮಾತ್ರ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

2011 ನೇ ವರ್ಷದಲ್ಲಿ ಈ ಕಾಯ್ದೆಯನ್ನು ತರಲಾಗಿದೆ. 2015ರಲ್ಲಿ ಈ ಕಾಯ್ದೆ ಜಾರಿಯಾಗಿದೆ. ಈ ಹಿಂದಿನ ವರ್ಷಗಳಲ್ಲಿ ಅಂದರೆ 2016 ರಿಂದ 2020ರ ವರೆಗೆ ಪ್ರತಿ ವರ್ಷವೂ ಈ ಸುತ್ತೋಲೆಯನ್ನು ನೀಡುತ್ತಾ ಬರಲಾಗಿದೆ. ಈ ಬಾರಿಯೂ ಹಾಗೆಯೇ ಸುತ್ತೋಲೆ ಕಳುಹಿಸಲಾಗಿದೆ. ಇದು ಖಾಸಗಿ ದೇವಾಲಯಗಳನ್ನು ವಶಕ್ಕೆ ಪಡೆಯುವುದಕ್ಕಾಗಿ ಕಳುಹಿಸಲಾದ ಸುತ್ತೋಲೆಯಲ್ಲ. ಈ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ ಎಂದು ಶ್ರೀನಿವಾಸ್‌ ಪೂಜಾರಿ ಹೇಳಿದ್ದಾರೆ.

Spread the love
  • Related Posts

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ಮೂಡುಬಿದಿರೆ: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂಡುಬಿದಿರೆಯ ಕೇಮಾರುವಿನಲ್ಲಿರುವ ಶ್ರೀ ಕ್ಷೇತ್ರ ಸಾಂದೀಪನಿ ಸಾಧನಾಶ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾ‌ರ್ ಅವರು ₹1 ಕೋಟಿ ಅನುದಾನ ಘೋಷಿಸಿದ್ದು, ಈ ಕುರಿತು ಮಠದ ಈಶ ವಿಠಲದಾಸ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.…

    Spread the love

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ರೈತರ ಸಮಸ್ಯೆಗಳ ಕುರಿತು ಪ್ರತ್ಯೇಕವಾಗಿ ಚರ್ಚೆ; ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳ ನಿರೀಕ್ಷೆ ಮಂಗಳೂರು: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ…

    Spread the love

    You Missed

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 6 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 17 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 12 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 24 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 32 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 17 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ