ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕರ್ನಾಟಕ ರಾಜ್ಯ ಪತ್ರದ ಅಧಿಸೂಚನೆ ಸಂಖ್ಯೆ 08/ನೇಮಕಾತಿ-2/2021-22, ದಿನಾಂಕ :03-03-2021 ನ್ನು ಮುಂದುವರೆಸುತ್ತಾ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು) ಒಟ್ಟು 402 ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಪ್ರಕಟಿಸಿದೆ. ಈ ಬಗ್ಗೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ https://recruitment.ksp.gov.in ನಲ್ಲಿ ಆನ್-ಲೈನ್ (On-line)) (ಎಲೆಕ್ಟಾçನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ : https://recruitment.ksp.gov.in ಗೆ ಭೇಟಿ ನೀಡಬಹುದಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 01-04-2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ 03-05-2021 ರ ಸಂಜೆ 6 ಗಂಟೆವರೆಗೆ ಅರ್ಜಿಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 05-05-2021
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 500 ರೂ.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.250 ರೂ.
ಅರ್ಜಿ ಶುಲ್ಕವನ್ನು ಅಧಿಕೃತ ಬ್ಯಾಂಕ್ ಶಾಖೆಗಳ / ಅಂಚೆ ಕಛೇರಿಯ ವೇಳೆ ಪಾವತಿಸಬೇಕಾಗಿದೆ.
ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ ಭರ್ತಿಮಾಡಿ ಸಲ್ಲಿಸಿರುವಂತ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು.
ತಪ್ಪು ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹವರ ವಿರುದ್ಧ ಕಾನೂನಿನನ್ವಯ ನೇಮಕಾತಿ ಸಮಿತಿಯು ಸೂಕ್ತ ಕ್ರಮ ಕೈಗೊಳ್ಳುವುದು.
ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿಮಾಡುವ ಸಂದರ್ಭದಲ್ಲಿ ಸಮಸ್ಯೆ ಎದುರಾದಲ್ಲಿ ಸಹಾಯವಾಣಿ (Help line) 080-22943346 ಅನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು. ಹಾಗೂ ತಾಂತ್ರಿಕ ತೊಂದರೆ ಎದುರಾದಲ್ಲಿ ಅದನ್ನು ಅದನ್ನು ಸ್ಥಗಿತಗೊಳಿಸಿ ಮತ್ತೊಮ್ಮೆ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಅರ್ಜಿಯನ್ನು ಭರ್ತಿ ಮಾಡಲು ತಿಳಿಸಲಾಗಿದೆ.
- ಅರ್ಹತಾ ಷರತ್ತುಗಳು:
ಎ) ಭಾರತೀಯ ನಾಗರಿಕನಾಗಿರತಕ್ಕದ್ದು.
ಬಿ) ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿ ಮತ್ತು ಈಗಾಗಲೇ ಇನ್ನೊಬ್ಬ ಹೆಂಡತಿ ಇರುವ ವ್ಯಕ್ತಿಯನ್ನು ಮದುವೆಯಾಗಿರುವ, ಮಹಿಳಾ ಅಭ್ಯರ್ಥಿಯು ಸರ್ಕಾರದಿಂದ ಪೂರ್ವಾನುಮತಿಯನ್ನು ಪಡೆಯದೇ ನೇಮಕಾತಿಗೆ ಅರ್ಹರಾಗುವುದಿಲ್ಲ.
ಸಿ) ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯ ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನು ಉಂಟು ಮಾಡುವ ಸಂಭವ ಇರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತರಾಗಿರಬೇಕು. - ವಯೋಮಿತಿ :
ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದAದು ಅಂದರೆ 03.05.2021 ಕ್ಕೆ ಅಭ್ಯರ್ಥಿಗೆ
ಕನಿಷ್ಟ 21 ವರ್ಷ ವಯಸ್ಸಾಗಿರಬೇಕು. ಈ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 32 ವರ್ಷಗಳು.
ಬಿ) ಇತರೆ ಅಭ್ಯರ್ಥಿಗಳಿಗೆ 30 ವರ್ಷಗಳು.
ಸೇವಾನಿರತ ಅಭ್ಯರ್ಥಿಗಳಿಗೆ:
ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷಗಳು.
ಬಿ) ಇತರೆ ಅಭ್ಯರ್ಥಿಗಳಿಗೆ 35 ವರ್ಷಗಳು.
ವಿದ್ಯಾರ್ಹತೆ: ಯು.ಜಿ.ಸಿ. ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ನಿಗದಿಪಡಿಸಿರುವ ಕೊನೆಯ ದಿನಾಂಕ,ಅಂದರೆ 03.05.2021ಕ್ಕೆ ಹೊಂದಿರಬೇಕು . ( ಮಾಜಿ ಸೈನಿಕ ಅಭ್ಯರ್ಥಿಗಳು ಸೈನ್ಯದಲ್ಲಿ ನೀಡಿದ ಪದವಿ ಪ್ರಮಾಣ ಪತ್ರವನ್ನು ದಿನಾಂಕ: 03.05.2021 ರೊಳಗೆ ಪಡೆದಿದ್ದರೆ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಪರಿಗಣಿಸಲಾಗುವುದು). ಸರ್ಕಾರದ ಸುತ್ತೋಲೆ ಸಂಖ್ಯೆ:ಸಿಆಸುಇ 81 ಸೇವನೆ 2017, ದಿನಾಂಕ: 27.02.2018 ರನ್ವಯ ಪದವಿ ವಿದ್ಯಾರ್ಹತೆಯ ತತ್ಸಮಾನ ವಿದ್ಯಾರ್ಹತೆಗಳನ್ನು ಕೆಳಗಿನಂತೆ ಸ್ಪಷ್ಟಪಡಿಸಲಾಗಿರುತ್ತದೆ.
1) ಯುಜಿಸಿಯಿಂದ ಮಾನ್ಯತೆ ಹೊಂದಿರುವ ಪರಿಗಣಿತ ವಿಶ್ವವಿದ್ಯಾಲಯಗಳು, ಖಾಸಗಿ/ಡೀಮ್ಡ್ ಹಾಗೂ ಹೊರರಾಜ್ಯದ ವಿಶ್ವವಿದ್ಯಾಲಯಗಳಿಂದ ಪಡೆದ ಪದವಿಗಳು. ಆದರೆ ವಿಶ್ವವಿದ್ಯಾಲಯಗಳ ಪದವಿಯ ತತ್ಸಮಾನದ (Equivalence of Degree) ಬಗ್ಗೆ ಶಿಕ್ಷಣಕ್ಕೆ ಸಂಬಂಧಿಸಿದಂತೆ , ಆಯಾ ವಿಶ್ವವಿದ್ಯಾಲಯ ಮತ್ತು ಉದ್ಯೋಗಕ್ಕೆ ಸಂಬಂಧಿಸಂದಂತೆ ಉದ್ಯೋಗ ನೀಡುವ ಪ್ರಾಧಿಕಾರ ತೀರ್ಮಾನ ತೆಗೆದುಕೊಳ್ಳಬೇಕಾಗಿರುತ್ತದೆ.
2) ಅಂಚೆ ಮತ್ತು ದೂರ ಶಿಕ್ಷಣದ ಮುಖಾಂತರ ಪಡೆದಿರುವ ಪದವಿಗಳು. ಆದರೆ, ನಿಯಮಬಾಹಿರವಾಗಿ ಕೆಲವು ವಿಶ್ವವಿದ್ಯಾಲಯಗಳು ಯು.ಜಿ.ಸಿ.ಯ ಅನುಮೋದನೆ ಇಲ್ಲದೆ ನಡೆಸುತ್ತಿರುವ ಅಂಚೆ ಮತ್ತು ದೂರ ಶಿಕ್ಷಣದ ಕೋರ್ಸುಗಳನ್ನು ಹಾಗೂ ಅಂಚೆ ಮತ್ತು ದೂರ ಶಿಕ್ಷಣದ ಮುಖಾಂತರ ಪಡೆದ ತಾಂತ್ರಿಕ ಪದವಿಗಳನ್ನು ನೇಮಕಾತಿಗೆ ಪರಿಗಣಿಸುವಂತಿಲ್ಲ.