ಕಲ್ಬುರ್ಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ದಿವ್ಯ ಹಾಗರಗಿ ಸೇರಿ ಐವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಸಿಐಡಿ ಎಸ್ಪಿ ರಾಘವೇಂದ್ರ ನೇತೃತ್ವದ ತಂಡ ಆರೋಪಿಗಳನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದು ಕಲಬುರ್ಗಿಗೆ ಕರೆತರಲಾಗುತ್ತಿದೆ.
ಸಿಐಡಿ ಅಧಿಕಾರಿಗಳು ಇಲ್ಲಿಯ ಚೌಕ ಠಾಣೆಯಲ್ಲಿ ಎಫ್ಐಆರ್ ದಾಖಲಿಸುತ್ತಿದ್ದಂತೆ ದಿವ್ಯ ನಾಪತ್ತೆಯಾಗಿದ್ದರು. 15 ದಿನಗಳಿಂದ ಹುಡುಕಾಟ ನಡೆಸಿದರೂ ಅವರನ್ನು ಪತ್ತೆಹಚ್ಚಲು ಸಿಐಡಿಗೆ ಸಾಧ್ಯವಾಗಿರಲಿಲ್ಲ. ವಿರೋಧ ಪಕ್ಷಗಳು ಇದನ್ನೇ ಅಸ್ತ್ರವಾಗಿಟ್ಟುಕೊಂಡು ಟೀಕಿಸುತ್ತಿದ್ದವು. ಈತನ್ಮಧ್ಯೆ ಸ್ಥಳೀಯ ನ್ಯಾಯಾಲಯ ದಿವ್ಯ ಹಾಗೂ ಇತರರು ಆರೋಪಿಗಳ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ. ಒಂದುವಾರದೊಳಗೆ ಶರಣಾಗಳು ಸೂಚಿಸಲಾಗಿತ್ತು. ಶರಣಾಗದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶವನ್ನು ನೀಡಿತ್ತು.