ಪಿಯು, ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಒಳ್ಳೆ ಸುದ್ದಿ: ಮುಂಬರುವ ಪರೀಕ್ಷೆಗಳಿಗೆ ಸಿದ್ಧವಾಗಲು “ದೀಕ್ಷಾ” ಆಯಪ್ ಲೋಕಾರ್ಪಣೆ

ಬೆಂಗಳೂರು: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು ಅಭಿವೃದ್ಧಿಪಡಿಸಿರುವ ‘ದೀಕ್ಷಾ’ ಆಪ್​ಗೆ (DIKSHA-app) ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬುಧವಾರ ಚಾಲನೆ ನೀಡಿದರು. 1ರಿಂದ 12ನೇ ತರಗತಿ ಎಲ್ಲ ಬಗೆಯ ಪಠ್ಯ ದೀಕ್ಯಾ ಆಪ್​ನಲ್ಲಿ ಲಭ್ಯವಿದ್ದು, SSLC ವಿದ್ಯಾರ್ಥಿಗಳಿಗೆ ಫೋಕಸ್ ಎಂಬ ಪುನರ್‌ಮನನ ಮತ್ತು ದ್ವಿತೀಯ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ‘ಪರೀಕ್ಷಾ ಅಭ್ಯಾಸ’ ಎಂಬ ಕಾರ್ಯಕ್ರಮಗಳು ಆಯಪ್​ನಲ್ಲಿ ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಸಹಾಯ ಮಾಡಲಿವೆ.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ಪಿಯುಸಿ ವಿದ್ಯಾರ್ಥಿಗಳಿಗೆ ಮುಂಬರಲಿರುವ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಉತ್ತಮ ರೀತಿಯಲ್ಲಿ ಆತ್ಮವಿಶ್ವಾಸದಿಂದ ಸಿದ್ಧರಾಗುವುದಕ್ಕೆ ಈ ಆಯಪ್ ಸಹಕಾರಿಯಾಗಲಿದೆ ಎಂದರು.

ಆಯಪ್​ನಲ್ಲಿ ಏನಿದೆ?
ಫೋಕಸ್ ಪುನರ್ಮನನ ಕಾರ್ಯಕ್ರಮವನ್ನು ದೀಕ್ಷಾದಲ್ಲಿ ಪ್ರಸ್ತುತಪಡಿಸಲಾಗಿದೆ. ಪ್ರತಿಯೊಂದು ವಿಷಯಕ್ಕೆ ಇ- ಪಠ್ಯಪುಸ್ತಕ, ಕನಿಷ್ಠ 2 ಮಾಡೆಲ್ ಪ್ರಶ್ನೆಪತ್ರಿಕೆಗಳು, ವಿವರಣಾತ್ಮಕ ವಿಡಿಯೋಗಳು, ಅಧ್ಯಾಯವಾರು ಅಭ್ಯಾಸ ಪ್ರಶ್ನೋತ್ತರಗಳು ಅದರಲ್ಲಿ ದೊರೆಯಲಿವೆ.

ವಿದ್ಯಾರ್ಥಿಗಳಿಗೆ ಮಂಬರಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವುದಕ್ಕೆ ಸಹಾಯ ಮಾಡಲು ಪಿಸಿಎಂಬಿ (PCMB) ವಿಷಯಕ್ಕೆ ಸುಮಾರು 9,000 ಬಹು ಆಯ್ಕೆ ಪ್ರಶ್ನೆಗಳನ್ನು (ಎಂಸಿಕ್ಯು) ಅಧ್ಯಾಯವಾರು ಒದಗಿಸಲಾಗಿದೆ. ದೇಶದಲ್ಲಿಯೇ ಇದೊಂದು ವಿನೂತನ ಪ್ರಯೋಗವಾಗಿದ್ದು, ನಮ್ಮ ಕರ್ನಾಟಕದ ಪದವಿ ಪೂರ್ವ ಶಿಕ್ಷಣ ಇಲಾಖೆಯು ಇದನ್ನು ಪ್ರಪ್ರಥಮವಾಗಿ ಜಾರಿಗೊಳಿಸುತ್ತಿದೆ. ಈ ಎಲ್ಲ ಪಠ್ಯಾಂಶಗಳನ್ನು ‘DIKSHA-app’ದಲ್ಲಿ ಪಡೆದುಕೊಳ್ಳಬಹುದಾಗಿದ್ದು, ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೋರಿದರು.

ಏನಿದು ದೀಕ್ಷಾ-ಆಪ್ ಪ್ರೋಗ್ರಾಂ??
DIKSHA ಪೋರ್ಟಲ್ ಅನ್ನು https://diksha.gov.in/ ಇಲ್ಲಿ ನೋಡಬಹುದಾಗಿದೆ. ಆಂಡ್ರಾಯ್ಡ್ ಸ್ಮಾರ್ಟ್​ಫೋನ್​ಗಳಲ್ಲಿ DIKSHA ಆಪ್​ನ್ನು ಗೂಗಲ್ ಪ್ಲೇಸ್ಟೋರ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ಈ ಲಿಂಕ್ ಒತ್ತಿ ದೀಕ್ಷಾ ಆಯಪ್​ ಡೌನ್ಲೋಡ್ ಮಾಡಿಕೊಳ್ಳಬಹುದು: http://bit.ly/KA-diksha

DIKSHA ಆಯಪ್​ ಅಥವಾ ಪೋರ್ಟಲ್ ನಲ್ಲಿ ನಿಮಗೆ ಬೇಕಿರುವ ಬೋರ್ಡ್, ಮಾಧ್ಯಮ, ಭಾಷೆ ಮತ್ತು ತರಗತಿಗಳನ್ನು ಆಯ್ಕೆ ಮಾಡಿಕೊಂಡು, ವಿವಿಧ ಬಗೆಯ ಪಠ್ಯಾಂಶಗಳನ್ನು ಪಡೆದುಕೊಳ್ಳಬಹುದು.

ದೀಕ್ಷಾ-ಆಪ್ ಉದ್ದೇಶ
ವಿದ್ಯಾರ್ಥಿಗಳಿಗೆ ಹೆಚ್ಚುವರಿ ಕಲಿಕಾ ಸಂಪನ್ಮೂಲಗಳನ್ನು ಒದಗಿಸಿ, ಅವರ ಕಲಿಕೆಯನ್ನು ಇನ್ನಷ್ಟು ಉತ್ತಮಗೊಳಿಸುವ ಉದ್ದೇಶದಿಂದ ಈ ಪ್ರೋಗ್ರಾಂ ರೂಪಿಸಲಾಗಿದೆ. ಕೊವಿಡ್ ಪಿಡುಗಿನ ಈ ಕಷ್ಟಕರ ಸನ್ನಿವೇಶದಲ್ಲಿ ವಿದ್ಯಾರ್ಥಿಗಳಿಗೆ ಶಾಲೆ, ಕಾಲೇಜುಗಳಿಗೆ ನಿಯಮಿತವಾಗಿ ಹೋಗುವುದಕ್ಕೆ ಸಾಧ್ಯವಾಗಿಲ್ಲ. ಶಿಕ್ಷಣ ಇಲಾಖೆಯು ಚಂದನ ಟಿವಿಯ ಮೂಲಕ ಆನಲೈನ್ ಪಾಠಗಳನ್ನು ನಡೆಸುತ್ತಿದೆ. ಆದಾಗ್ಯೂ ಎಲ್ಲ ವಿದ್ಯಾರ್ಥಿಗಳಿಗೆ ಎಲ್ಲಾ ಪಾಠಗಳನ್ನು ವೀಕ್ಷಿಸುವುದು ಸಾಧ್ಯವಾಗಿರುವುದಿಲ್ಲ. ದೀಕ್ಷಾ ಪೋರ್ಟಲ್​ನಲ್ಲಿ ಅಳವಡಿಸಲಾಗಿರುವ ಈ ಎಲ್ಲಾ ಇ-ಕಲಿಕಾ ಸಂಪನ್ಮೂಲಗಳನ್ನು ವಿದ್ಯಾರ್ಥಿಗಳು ತಮಗೆ ಸಾಧ್ಯವಾದಾಗ ಮತ್ತು ಅಗತ್ಯವಿದ್ದಾಗ ಬಳಸಬಹುದಾಗಿದೆ.

Spread the love
  • Related Posts

    ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ / Dress Designing (ಚೂಡಿದಾರ್, ಬ್ಲೌಸ್, ಗೌನ್‌, ಸಾರಿ ಸ್ಕರ್ಟ್, ನೈಟಿ, ಫ್ರಾಕ್ , ಸ್ಯಾರಿ ಫಾಲ್, ಸಾರಿ ಕುಚ್ಚು ಇತ್ಯಾದಿ) ತರಬೇತಿಯನ್ನು…

    Spread the love

    ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ, ಪಾವತಿಗೂ ಮುನ್ನಾ ಜಾಗೃತರಾಗಿ

    ಮೋಸ ಹೋಗುವವರು ಇರುವವರೆಗೂ ಮೋಸಮಾಡುವವರು ಜೀವಂತ ಇರುತ್ತಾರೆ ಹಾಗಂತಾ ನಾವು ನಮ್ಮ ಎಚ್ಚರಿಕೆಯಲ್ಲಿ ಇರಬೇಕು ಸ್ವಲ್ಪ ಯಮಾರಿದ್ರು ಖಾತೆಯಿಂದ ಮಾಯವಾಗಬಹುದು. ಹಣ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬೇರೆಬೇರೆ ರೀತಿಯಲ್ಲಿ ಹಣ ಕಳೆದುಕೊಂಡವರನ್ನು ಕಾಣಬಹುದು ಹಾಗೆ ಮೋಸ ಮಾಡುವವರು ಬೇರೆ ಬೇರೆ…

    Spread the love

    You Missed

    ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಹಬ್ಬದ ಆಚರಣೆ

    • By admin
    • December 17, 2024
    • 88 views
    ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಹಬ್ಬದ ಆಚರಣೆ

    ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

    • By admin
    • December 15, 2024
    • 52 views
    ರುಡ್ ಸೆಟ್ ಸಂಸ್ಥೆ,  ಉಜಿರೆಯಲ್ಲಿ  ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

    ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ, ಪಾವತಿಗೂ ಮುನ್ನಾ ಜಾಗೃತರಾಗಿ

    • By admin
    • December 14, 2024
    • 54 views
    ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ,  ಪಾವತಿಗೂ ಮುನ್ನಾ ಜಾಗೃತರಾಗಿ

    ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ  ರಾಷ್ಟ್ರಪತಿಗಳ  ಭೇಟಿ

    • By admin
    • December 12, 2024
    • 138 views
    ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ  ರಾಷ್ಟ್ರಪತಿಗಳ  ಭೇಟಿ

    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    • By admin
    • December 10, 2024
    • 77 views
    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

    • By admin
    • December 10, 2024
    • 88 views
    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ