ಪಬ್ ಜೀ ಆಟದಲ್ಲಿ ಗೆದ್ದವ ಜೀವನದ ಆಟದಲ್ಲಿ ಗೆಲ್ಲಲಿಲ್ಲ! 13ವರ್ಷದ ಬಾಲಕನ ಕೊಲೆಗೆ ಪಬ್ ಜೀ ಜತೆಗಾರನೇ ಕಾರಣನಾದನೇ! ಮಕ್ಕಳ ಕೈಯಲ್ಲಿ ಮೊಬೈಲ್ ಎಂಬ ಮಾಯಾಂಗನೇಯನ್ನು ಕೊಡುವ ಪೋಷಕರು ತಪ್ಪದೇ ಓದಿ

ಉಳ್ಳಾಲ: ನಾಪತ್ತೆಯಾಗಿದ್ದ 13 ವರ್ಷದ ಬಾಲಕನ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದ್ದು, ಮೃತದೇಹವು ಉಳ್ಳಾಲ ಠಾಣಾ ವ್ಯಾಪ್ತಿಯ ಕೆ.ಸಿ ರೋಡು ಬಳಿ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.

ಕೆ.ಸಿ ರೋಡ್ ನಿವಾಸಿ ಹನೀಫ್ ಎಂಬವರ ಪುತ್ರ ಹಕೀಫ್‌ (12) ಮೃತ ಬಾಲಕ. ಅವರ ಮನೆಯಿಂದ 3 ಕಿಲೊ ಮೀಟರ್‌ ದೂರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಕೊಲೆಯಾದ ಬಾಲಕ ಹಕೀಫ್

ಶನಿವಾರ ಸಂಜೆಯಿಂದ ನಾಪತ್ತೆಯಾಗಿದ್ದ ಹಕೀಫ್‌ ಕುರಿತು ಹೆತ್ತವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು‌ ದಾಖಲಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಠಾಣಾ ಪೊಲೀಸರು ಆತನ ಪಬ್‌ ಜಿ ಜತೆಗಾರ ದೀಪಕ್‌ (18)ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಕೀಫ್‌ ಯಾವತ್ತೂ ಪಬ್ ಜಿ ಆಟದಲ್ಲಿ ಗೆಲ್ಲುತ್ತಿದ್ದ. ನೆರೆಮನೆಯ ನಿವಾಸಿ ದೀಪಕ್ ಜತೆಗೂ ಆಟಕ್ಕೆ ಮುಂದಾಗಿದ್ದ. ಆನ್ ಲೈನ್ ಮೂಲಕ ಆಟವಾಡಿದ ಸಂದರ್ಭ ಹಕೀಬ್ ಗೆಲುವು ಸಾಧಿಸಿದಾಗ ಸಂಶಯ ವ್ಯಕ್ತಪಡಿಸಿದ ದೀಪಕ್, ನಿನ್ನ ಆಟ ಬೇರೆ ಯಾರೋ ಆಡುತ್ತಿದ್ದಾರೆ. ಅದಕ್ಕೆ ಎದುರುಬದುರಾಗಿ ಕುಳಿತು ಆಡುವ ಸವಾಲು ಹಾಕಿದ್ದ. ಅದರಂತೆ ಶನಿವಾರ ಸಂಜೆ ಬಳಿಕ ಇಬ್ಬರೂ ಜೊತೆಯಾಗಿ ಆಟವಾಡಲು ಆರಂಭಿಸಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.

ಆಟದಲ್ಲಿ ಹಾಕೀಬ್ ಸೋಲನು ಕಂಡಿದ್ದಾನೆ. ಇದರಿಂದ ದೀಪಕ್- ಹಕೀಫ್‌ ನಡುವೆ ವಾಗ್ವಾದ ನಡೆದಿತ್ತು. ಇದರಿಂದ ಕುಪಿತಗೊಂಡ ಹಕೀಫ್‌ ಸಣ್ಣ ಕಲ್ಲೆಸೆದು ದೀಪಕ್‌ಗೆ ಹಲ್ಲೆ ನಡೆಸಿದ್ದ. ಇದರಿಂದ ರೊಚ್ಚಿಗೆದ್ದ ದೀಪಕ್ ದೊಡ್ಡ ಕಲ್ಲನ್ನು ಹಕೀಫ್‌ ಮೇಲೆ ಹಾಕಿದಾಗ ವಿಪರೀತ ರಕ್ತಸ್ರಾವ ಉಂಟಾಗಿ ಆತ ಸ್ಥಳದಲ್ಲೇ ಕುಸಿದುಬಿದ್ದಿದ್ದ. ಗಾಬರಿಗೊಂಡ ದೀಪಕ್ ಆತನನ್ನು ಸಮೀಪದಲ್ಲೇ ಇದ್ದ ಕಂಪೌಂಡ್ ಪಕ್ಕಕ್ಕೆ ಕರೆದೊಯ್ದು ಬಾಳೆ ಎಲೆ, ತೆಂಗಿನಗರಿಗಳನ್ನು ಮುಚ್ಚಿ ಪರಾರಿಯಾಗಿದ್ದನು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಭಾನುವಾರ ಬೆಳಿಗ್ಗೆ ಸ್ಥಳೀಯರು ಹಕೀಫ್‌ನ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ದೀಪಕ್ ನನ್ನು ವಶಕ್ಕೆ ಪಡೆದುಕೊಂಡಿರುವ ಉಳ್ಳಾಲ ಪೊಲೀಸರು ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.

ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಭೇಟಿ ನೀಡಿದರು. ಪೋಷಕರು ಮಕ್ಕಳ ಕೈಗೆ ಮೊಬೈಲ್ ನೀಡಿದಾಗ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದರು. ಪಬ್ ಜಿ ಆಟ ಬ್ಯಾನ್ ಆದರೂ ಬೇರೆ ವರ್ಷನ್ ಗಳನ್ನು ಮಕ್ಕಳು ಉಪಯೋಗಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು.

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 18 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 23 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 39 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 215 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 62 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ