ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬಾಲಕಿಯರದ್ದೇ ಮೇಲುಗೈ, ಉಡುಪಿ ದ.ಕ ಜಿಲ್ಲೆಗಳು ಅಗ್ರಸ್ಥಾನದಲ್ಲಿ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು ಶೇ.69.20 ಫಲಿತಾಂಶ ದಾಖಲಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಗಿತ ಕಂಡಿದೆ. ಕಳೆದ ವರ್ಷ ಶೇ.68.68 ಫಲಿತಾಂಶ ಬಂದಿತ್ತು. 5,56,267 ಹೊಸದಾಗಿ ಬರೆದ ವಿದ್ಯಾರ್ಥಿಗಳ ಪೈಕಿ 3,84,947 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮೊದಲ ಸ್ಥಾನ ಸಿಕ್ಕಿದೆ. ಕೊಡಗು, ಉತ್ತರ ಕನ್ನಡ ಜಿಲ್ಲೆಗಳು ಕ್ರಮವಾಗಿ ಎರಡು, ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದರೆ, ವಿಜಯಪುರಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 1,83,725 (ಶೇ.54.55) ಬಾಲಕರು 2,43,572(ಶೇ.68.73) ಬಾಲಕಿಯರು ತೇರ್ಗಡೆಯಾಗಿದ್ದಾರೆ.

ಇಂದು ಬೆಳಿಗ್ಗೆ 11.30ಕ್ಕೆ ಸಚಿವ ಶ್ರೀ ಎಸ್. ಸುರೇಶ್ ಕುಮಾರ್ ಪಿಯು ಬೋರ್ಡ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಅನೇಕ ಸವಾಲಿನ ಮಧ್ಯೆ ಪರೀಕ್ಷೆ ನಡೆದಿದೆ. ದೇಶದಲ್ಲಿ ಮೊದಲ ರಾಜ್ಯ ಈ ಕಷ್ಟದಲ್ಲಿ ಪರೀಕ್ಷೆ ಮಾಡಿ ಫಲಿತಾಂಶ ನೀಡುತ್ತಿದೆ ಎಂದು ಸುರೇಶ್‌ ಕುಮಾರ್‌ ತಿಳಿಸಿದರು.

ಉತ್ತೀರ್ಣಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಮೂಲಕ ಸಂದೇಶ ರವಾನೆಯಾಗಲಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಸರ್ಕಾರ ಅಧಿಕೃತ ಜಾಲತಾಣ www.karresults.nic.in ಗಳಲ್ಲಿಯೂ ಸಹ ವೀಕ್ಷಿಸಬಹುದು.

ಜಿಲ್ಲಾವಾರು ಫಲಿತಾಂಶ
ಉಡುಪಿ, ದಕ್ಷಿಣ ಕನ್ನಡ
 ಮೊದಲ ಸ್ಥಾನ – ಶೇ.90.71
ಕೊಡಗು ಎರಡನೇ ಸ್ಥಾನ – ಶೇ.81.53
ಉತ್ತರ ಕನ್ನಡ ಮೂರನೇ ಸ್ಥಾನ – ಶೇ.80.97

ಯಾವ ಶ್ರೇಣಿಯಲ್ಲಿ ಎಷ್ಟು ಮಂದಿ?
ಉನ್ನತ – 2,21,867
ಪ್ರಥಮ – 2,21,867
ದ್ವಿತಿಯ – 77,455
ತೃತೀಯ – 49,110

ವಿಭಾಗವಾರು ಫಲಿತಾಂಶ
ಕಲಾ – ಶೇ.41.27(ಕಳೆದ ವರ್ಷ ಶೇ.50.53)
ವಿಜ್ಞಾನ -ಶೇ.76.02% ( ಕಳೆದ ವರ್ಷ ಶೇ. 66.58)
ಕಾಮರ್ಸ್-ಶೇ. 65.53( ಕಳೆದ ವರ್ಷ 66.39)

ವಿಭಾಗವಾರು ಅತಿ ಹೆಚ್ಚು ಅಂಕ
ಕಲಾ – 594
ವಾಣಿಜ್ಯ ವಿಭಾಗ – 598
ವಿಜ್ಞಾನ ವಿಭಾಗ – 596

ಈ ಬಾರಿ ಒಟ್ಟು 6 ಲಕ್ಷದ 80 ಸಾವಿರದ 49 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 3 ಲಕ್ಷದ 38 ಸಾವಿರದ 431 ವಿದ್ಯಾರ್ಥಿಗಳು ಹಾಗೂ 3 ಲಕ್ಷದ 41 ಸಾವಿರದ 618 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ. ರಾಜ್ಯಾದ್ಯಂತ 1016 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, 70 ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆದಿತ್ತು. ಒಟ್ಟು 11,970 ಶಿಕ್ಷಕರು ಮೌಲ್ಯಮಾಪಕರಾಗಿ ಕರ್ತವ್ಯ ನಿರ್ವಹಿಸಿದ್ದರು.

Spread the love
  • Related Posts

    ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್

    ಗುರುವಾಯನಕೆರೆ: ನೀಟ್, ಜೆಇಇ ಮೈನ್ಸ್ ಮತ್ತು ಅಡ್ವಾನ್ಸ್, ಸಿಇಟಿ, ಬಿಎಸ್ಸಿ ಅಗ್ರಿ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಉದ್ದೇಶಿಸಿರುವ ವಿದ್ಯಾರ್ಥಿಗಳಿಗೆ ಒಂದು ಸ್ವರ್ಣಾವಕಾಶ. ನೂರಾರು ವಿದ್ಯಾರ್ಥಿಗಳನ್ನು ಜಗತ್ತಿನ ಶ್ರೇಷ್ಠ ಏಮ್ಸ್, ಜಿಸ್ಟ್ರಾರ್, ಐಐಟಿ, ಐಐಐಟಿ, ಎನ್ ಐಐಟಿ ಹಾಗೂ ಉತ್ಕೃಷ್ಟ…

    Spread the love

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    You Missed

    ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್

    • By admin
    • March 16, 2026
    • 3 views
    ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 67 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 107 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 46 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 615 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 152 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ