ಬೆಂಗಳೂರು: ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಚಿತ್ರದುರ್ಗದ ಮುರುಘಾಮಠದ ಪ್ರತಿಷ್ಠಿತ ಪ್ರಶಸ್ತಿಯಾದ ‘ಬಸವಶ್ರೀ ಪ್ರಶಸ್ತಿ’ ನೀಡಲಾಗುವುದು ಎಂದು ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿಯವರು ತಿಳಿಸಿದ್ದಾರೆ.
ಮುಂದಿನ ವರ್ಷದ ಬಸವ ಜಯಂತಿ ದಿನದಂದು 2022ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಮುರುಘಾಮಠದ ಅನುಭವ ಮಂಟಪದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಬಸವಶ್ರೀ ಪ್ರಶಸ್ತಿ’ ಮೊತ್ತ ಐದು ಲಕ್ಷ ರೂ. ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವು. ಕಾರ್ಯಕ್ರಮಕ್ಕೆ ಡಾ. ಶಿವರಾಜಕುಮಾರ್ ಅವರನ್ನು ಆಹ್ವಾನಿಸಲಾಗುವುದು ಎಂದು ಪೀಠಾಧಿಪತಿ ಡಾ. ಶಿವಮೂರ್ತಿಯವರು ತಿಳಿಸಿದ್ದಾರೆ.