ಮಣ್ಣಲ್ಲಿ ಮಣ್ಣಾಗಿ ‘ಕಾಣದಂತೆ ಮಾಯವಾದ’ಅಭಿಮಾನಿಗಳ ‘ಯುವರತ್ನ’

ಬೆಂಗಳೂರು: ಕಂಠೀರವ ಸ್ಟುಡಿಯೋದಲ್ಲಿ ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಪುನೀತ್ ಅವರ ಪತ್ನಿ ಅಶ್ವಿನಿ ಅವರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು.
ಆತ್ಮೀಯ ಮಿತ್ರನಿಗೆ ಸಿಎಂ ಮುತ್ತಿನ ವಿದಾಯ

ರಾಜ್​ಕುಮಾರ್​ ಕುಟುಂಬದವರು ಈಡಿಗ ಸಂಪ್ರದಾಯದಂತೆ ಕಾರ್ಯ ನೆರವೇರಿಸಿದ್ದಾರೆ. ಪುನೀತ್​ಗೆ ಗಂಡು ಮಕ್ಕಳು ಇಲ್ಲದ ಕಾರಣ ರಾಘವೇಂದ್ರ ರಾಜ್​ಕುಮಾರ್​ ಪುತ್ರ ವಿನಯ್​ ರಾಜ್​ಕುಮಾರ್​ ಅವರಿಂದ ಅಂತಿಮ ವಿಧಿವಿಧಾನ ಮಾಡಿಸಲಾಗಿದೆ. ಡಾ. ರಾಜ್​ಕುಮಾರ್​ ಸಮಾಧಿಯಿಂದ 125 ಅಡಿ ಅಂತರ ಹಾಗೂ ಪಾರ್ವತಮ್ಮ ರಾಜ್​ಕುಮಾರ್​ ಸಮಾಧಿಯಿಂದ 45 ಅಡಿ ಅಂತರದಲ್ಲಿ ಪುನೀತ್​ ರಾಜ್​ಕುಮಾರ್​​ ಅವರ ಅಂತ್ಯಕ್ರಿಯೆ ಮಾಡಲಾಗಿದೆ.

READ ALSO

ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪತ್ನಿ ಅಶ್ವಿನಿ, ಪುತ್ರಿಯರಾದ ವಂದನಾ ಮತ್ತು ಧೃತಿ ತಾಯಿಯನ್ನು ತಬ್ಬಿಕೊಂಡು ಕಣ್ಣೀರು ಹಾಕುತ್ತಿರುವ ದೃಶ್ಯ ಮನ ಕಲಕುವಂತಿತ್ತು. ಚಿತ್ರರಂಗ ಹಾಗೂ ರಾಜಕೀಯದ ಅನೇಕ ಗಣ್ಯರು ಭಾಗಿ ಆಗಿದ್ದರು. ಕಂಠೀರವ ಸ್ಟುಡಿಯೋ ಆವರಣದ ಒಳಗೆ ಕುಟುಂಬದವರಿಗೆ ಮತ್ತು ಗಣ್ಯರಿಗೆ ಮಾತ್ರ ಪ್ರವೇಶ ನೀಡಲಾಗಿತ್ತು.

ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹಸಚಿವ ಆರಗ ಜ್ಞಾನೇಂದ್ರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​, ಮುನಿರತ್ನ, ರಾಕ್​​ಲೈಕ್​ ವೆಂಕಟೇಶ್​, ಕಿಚ್ಚ ಸುದೀಪ್​, ರವಿಚಂದ್ರನ್​ ಮುಂತಾದವರು ಸ್ಥಳದಲ್ಲಿದ್ದು, ಪುನೀತ್​ಗೆ ಅಂತಿಮ ವಿಧಾಯ ಹೇಳಿದ್ದಾರೆ. ಬೆಳಗ್ಗೆ ನಾಲ್ಕು ಗಂಟೆಯಿಂದಲೇ ಕಂಠೀರವ ಸ್ಟೇಡಿಯಂನಿಂದ ಪುನೀತ್​ ರಾಜ್​ಕಮಾರ್​ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು.