ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಪಿ.ವಿ. ಸಿಂಧು

ನವದೆಹಲಿ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು (PV Sindhu) ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ (CWG 2022) ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಮಹಿಳಾ ಸಿಂಗಲ್ಸ್​ ಬ್ಯಾಡ್ಮಿಂಟನ್​ ಫೈನಲ್​ನಲ್ಲಿ ಕೆನಡಾದ ಮಿಶೆಲ್ ಲಿ ಅವರನ್ನು 21-15, 21-13 ನೇರ ಸೆಟ್​ಗಳಿಂದ ಸೋಲಿಸುವ ಮೂಲಕ ಸಿಂಧು ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದರು. ಈ ಮೂಲಕ ಪದಕ ಪಟ್ಟಿಯಲ್ಲಿ ಭಾರತದ ಒಟ್ಟಾರೆ ಚಿನ್ನದ ಪದಕದ ಸಂಖ್ಯೆಯನ್ನು 19 ಕ್ಕೇರಿಸಿದರು.

ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಈ ಪಂದ್ಯದ ಮೊದಲ ಸೆಟ್ ಅನ್ನು ಪಿವಿ ಸಿಂಧು 21-15 ಅಂತರದಿಂದ ಗೆದ್ದುಕೊಂಡರು. ಇನ್ನು 2ನೇ ಸೆಟ್​ನಲ್ಲಿ ಆರಂಭದಲ್ಲೇ 6-3 ಅಂತರದಿಂದ ಮುನ್ನಡೆ ಕಾಯ್ದುಕೊಂಡ ಭಾರತೀಯ ಆಟಗಾರ್ತಿ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಅಷ್ಟೇ ಅಲ್ಲದೆ ಮಿಶೆಲ್ 6 ಪಾಯಿಂಟ್ ಕಲೆಹಾಕುವ ವೇಳೆಗೆ ಸಿಂಧು 12 ಪಾಯಿಂಟ್ ಗಳಿಸಿದ್ದರು.ಆದರೆ ಇದಾದ ಬಳಿಕ ಕಂಬ್ಯಾಕ್ ಮಾಡಿದ ಕೆನಡಾ ಆಟಗಾರ್ತಿ ಬ್ಯಾಕ್ ಟು ಬ್ಯಾಕ್ ಪಾಯಿಂಟ್ ಗಳಿಸಿ ಅಂತರವನ್ನು 15-11 ಕ್ಕೆ ತಂದು ನಿಲ್ಲಿಸಿದರು. ಈ ಹಂತದಲ್ಲಿ ಆಕ್ರಮಣಕಾರಿ ಆಟವಾಡುವ ಮೂಲಕ ತಮ್ಮ ಅನುಭವವನ್ನು ತೆರೆದಿಟ್ಟ  ಪಿವಿ ಸಿಂಧು ಎದುರಾಳಿ ಮೇಲೆ ಒತ್ತಡ ಹೆಚ್ಚಿಸಿದರು. ಅಲ್ಲದೆ  21 – 13 ಅಂತರದಿಂದ ಸೋಲಿಸಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು.

ಮಾಜಿ ವಿಶ್ವ ಚಾಂಪಿಯನ್ ಪಿವಿ ಸಿಂಧು 2014 ಮತ್ತು 2018 ರ ಕಾಮನ್​ವೆಲ್ತ್​ ಆವೃತ್ತಿಗಳಲ್ಲಿ ಕಂಚು ಮತ್ತು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದರು. ಇದೀಗ ಚಿನ್ನದ ಪದಕ ಗೆಲ್ಲುವ ಮೂಲಕ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಭಾರತಕ್ಕಾಗಿ ಮೂರು ವಿಭಿನ್ನ ಪದಕಗಳನ್ನು ಗೆದ್ದ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಇದಕ್ಕೂ ಮುನ್ನ ಸೆಮಿಫೈನಲ್​ನಲ್ಲಿ ಸಿಂಗಾಪುರದ ಯೆಯೊ ಜಿಯಾ ಮಿನ್ ಅವರನ್ನು 21-19 21-17 ಅಂತರದಿಂದ ಸೋಲಿಸಿ ಫೈನಲ್​ಗೆ ಲಗ್ಗೆಯಿಟ್ಟಿದ್ದರು. ಈ ಬಾರಿಯ ಕ್ರೀಡಾಕೂಟದಲ್ಲಿ ತನ್ನ ತಾಂತ್ರಿಕ ಕುಶಾಗ್ರಮತಿಯನ್ನು ಪ್ರದರ್ಶಿಸಿದ್ದ ಸಿಂಧು ಆರಂಭದಿಂದಲೂ ಪ್ರತಿ ಆಟಗಾರರ ವಿರುದ್ದ ಮೇಲುಗೈ ಸಾಧಿಸುತ್ತಾ ಬಂದಿದ್ದರು.

ಅದರಲ್ಲೂ ಸ್ಟಾರ್ ಆಟಗಾರ್ತಿ ಯೆಯೊ ಜಿಯಾ ಮಿನ್ ಸೆಮಿಫೈನಲ್​ನಲ್ಲಿ ಭಾರೀ ಪೈಪೋಟಿ ಎದುರಿಸಬೇಕಾಯಿತು. ಇದಾಗ್ಯೂ ಪರಿಪೂರ್ಣವಾದ ನೆಟ್ ಶಾಟ್‌ನೊಂದಿಗೆ 19-12 ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಎದುರಾಳಿಯ ಫೋರ್‌ಹ್ಯಾಂಡ್ ರಿಟರ್ನ್ ಶಾಟ್ ತಪ್ಪುಗಳನ್ನು ಬಳಸಿಕೊಂಡ ಸಿಂಧುಗೆ ಬ್ಯಾಕ್ ಟು ಬ್ಯಾಕ್ ಪಾಯಿಂಟ್​ಗಳಿಸುತ್ತಾ ಒತ್ತಡ ಹಾಕುವಲ್ಲಿ ಯಶಸ್ವಿಯಾಗಿದ್ದರು.

ಅದರಂತೆ 49 ನಿಮಿಷಗಳ ಕಾದಾಟದಲ್ಲಿ ಅಂತಿಮವಾಗಿ ಯೊಯೊ ಜಿಯಾರನ್ನು 21-19 21-17 ನೇರ ಸೆಟ್​ಗಳಿಂದ ಸೋಲಿಸಿ ಫೈನಲ್​ಗೆ ಲಗ್ಗೆಯಿಟ್ಟಿದ್ದರು. ಫೈನಲ್​ನಲ್ಲಿ ಮಿಶೆಲ್ ಲಿ ಅವರಿಗೆ ಸೋಲುಣಿಸುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ.

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 147 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು