ಬೆಂಗಳೂರು: ಕನ್ನಡದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿಯವರಿಗೆ ಸಿಸಿಬಿ ನೋಟಿಸ್ ನೀಡಿದ್ದು, ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಆರೋಪಿ ಯುವರಾಜ್ ಖಾತೆಯಿಂದ ರಾಧಿಕಾ ಕುಮಾರಸ್ವಾಮಿಯವರಿಗೆ ಕೋಟಿ ಕೋಟಿ ಹಣ ವರ್ಗಾವಣೆ ಆಗಿದೆ ಎನ್ನುವ ಆರೋಪಗಳು ಕೇಳಿ ಬರ್ತಿದ್ದು, ಈ ಹಿನ್ನೆಲೆಯಲ್ಲಿ ನಟಿಮಣಿಯನ್ನ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಇನ್ನು ನಾಳೆಯೇ ಸಿಸಿಬಿ ಕಚೇರಿಗೆ ಬಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ʼನಲ್ಲಿ ತಿಳಿಸಿದ್ದಾರೆ.
ವಾಟ್ಸಾಪ್ ಮತ್ತು ಟೆಕ್ಸ್ಟ್ ಮೆಸೇಜ್ ಮೂಲಕ ಅಧಿಕಾರಿಗಳು ನಟಿ ರಾಧಿಕಾಗೆ ನೋಟಿಸ್ ಕಳುಹಿಸಿದ್ದು, ನಾಳೆ ಸಿಸಿಬಿ ವಿಚಾರಣೆಗೆ ಹಾಜರಾಗಲಿದ್ದಾರೆ.