ಬೆಂಗಳೂರು : ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಆರೋಗ್ಯದಲ್ಲಿ ಏರು ಪೇರು ಆಗಿದ್ದು, ಅವರನ್ನು ನಗರದ ರಾಜಾಜಿನಗರ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಟ ರಾಘವೇಂದ್ರ ರಾಜ್ ಕುಮಾರ್ ಇಂದು ಬೆಳಕು ಸಿನಿಮಾದ ಶೂಟಿಂಗ್ ಗೆ ಹಾಜರಾಗಿದ್ದರು. ಈ ಸಂದರ್ಭದಲ್ಲಿ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಆಸ್ಪತ್ರೆಯತ್ತ ಡಾ ರಾಜ್ ಕುಟುಂಬ ಧಾವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.