ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಹಗರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿಯನ್ನು ಸಿಸಿಬಿ ಪೊಲೀಸರು ಶುಕ್ರವಾರ ಸಂಜೆ ಬಂಧಿಸಿದ್ದಾರೆ.
ಇಂದು ಬೆಳಗ್ಗೆ ವಿಚಾರಣೆಗೆ ಆಗಮಿಸಿದ ರಾಗಿಣಿ ಅವರನ್ನು ಸಿಸಿಬಿ ಅಧಿಕಾರಿಗಳು ಸುದೀರ್ಘ ವಿಚಾರಣೆ ನಡೆಸಿದರು. ಅವರನ್ನು ಬಂಧಿಸಿರುವ ಬಗ್ಗೆ ಸಂಜೆಯಷ್ಟೇ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.
ಸ್ಯಾಂಡಲ್ ವುಡ್ ನಲ್ಲಿ ಮಾದಕ ದ್ರವ್ಯ ಜಾಲ ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕಳೆದ ಕೆಲವು ದಿನಗಳಿಂದ ತಮ್ಮ ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ನಟಿ ರಾಗಿಣಿ ಮನೆಯಲ್ಲಿ ಹುಡುಕಾಟದ ವೇಳೆ ಕೆಲ ಮೊಬೈಲ್ ಗಳು ಹಾಗೂ ಡ್ರಗ್ಸ್ ಕೂಡ ಪತ್ತೆಯಾಗಿದೆ.
ನಟಿ ರಾಗಿಣಿ ದ್ವಿವೇದಿ ಅವರ ಆಪ್ತ ರವಿಶಂಕರ್ ನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದ ಸಂದರ್ಭದಲ್ಲಿ ಮಾದಕ ದ್ರವ್ಯ ವ್ಯವಹಾರ ಚಟುವಟಿಕೆಗಳಲ್ಲಿ ರಾಗಿಣಿಗೂ ಸಂಬಂಧ ಇರುವ ಕುರಿತಾಗಿ ಮಾಹಿತಿ ಲಭ್ಯವಾಗಿತ್ತು.