ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

  1. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ವಸತಿ ಶಾಲೆಗಳಿಗೆ ಮತ್ತು ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಯಾವುದೇ ತರಗತಿಗಳನ್ನು ನಡೆಸದಂತೆ ಆದೇಶಿಸಿ, ದಿನಾಂಕ: 23.07.2026 ರಂದು ರಜೆಯನ್ನು ಘೋಷಿಸಲಾಗಿರುತ್ತದೆ. ಸದರಿ ಆದೇಶವನ್ನು ಉಲ್ಲಂಘಿಸಿದಲ್ಲಿ, ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಕಲಂ 51(ಬಿ) ರ ಅನ್ವಯ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು.
  2. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
  3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
  4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
  5. ಪ್ರವಾಸಿಗರು/ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
  6. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.
  • ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು. ಎಂದು ಜಿಲ್ಲಾಡಳಿತ ಸೂಚಿಸಿದೆ
Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 2 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 6 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 8 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 10 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 9 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 15 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ