ದೊಡ್ಡ ಪರಿಣಾಮ‌ ನೀಡಬಲ್ಲ ಸಣ್ಣ ಸಣ್ಣ ಸೇವೆಗಳ ಮೂಲಕ ಜನಕಲ್ಯಾಣ: ಜಯಂತ ನಡುಬೈಲು

ಬೆಳ್ತಂಗಡಿ: ರಾಜಕೇಸರಿ ಸಂಘಟನೆ ಕಳೆದ ಏಳು ವರ್ಷಗಳಿಂದ ಜನಪರ‌ ಮಾದರಿ ಕೆಲಸ‌ಮಾಡುತ್ತಿದೆ. ದೈನಂದಿನ ಕೆಲಸ‌ಕಾರ್ಯಗಳಲ್ಲಿ ತೊಡಗಿಸಿ ಕೊಂಡಿರುವವರೇ ಸೇರಿಕೊಂಡು ಮಾಡುವ ಸಣ್ಣ ಸಣ್ಣ ಸೇವೆ ದೊಡ್ಡ ಪ್ರಯೋಜನಕ್ಕೆ ಕಾರಣವಾಗುತ್ತದೆ ಎಂದುಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷ ಜಯಂತ ನಡುಬೈಲು ಹೇಳಿದರು.

ಅವರು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ, ರಾಜಕೇಸರಿ ಬೆಳ್ತಂಗಡಿ ಇವರ ಆಶ್ರಯದಲ್ಲಿ ಅನುಗ್ರಹ ಜನಸೇವಾ ಕೇಂದ್ರದ ಸಹಯೋಗದಲ್ಲಿ ಆ. 30 ರಂದು ಸುವರ್ಣ ಆರ್ಕೆಡ್ ಸಭಾಂಗಣದಲ್ಲಿ ಆಯೋಜನೆಗೊಂಡಿದ್ದ ಆಯುಷ್ಮಾನ್, ಕಿಸಾನ್ ಸಮ್ಮಾನ್,ಕಾರ್ಮಿಕ ಕಾರ್ಡ್ ನೋಂದಾವಣೆ ಮತ್ತು ಸರಕಾರಿ ಯೋಜನೆಗಳ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆಯನ್ನು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ವಹಿಸಿದ್ದರು.

ಸಮಾರಂಭದಲ್ಲಿ ಅತಿಥಿಗಳಾಗಿದ್ದ ಗೌಡ ಸಮಾಜದ ಅಧ್ಯಕ್ಷ ಸೋಮೇಗೌಡ, ಕುಲಾಲರ ಸಂಘದ ಅಧ್ಯಕ್ಷ ಹರೀಶ್ ಮೂಲ್ಯ ಕಾರಿಂಜ, ಬಿಲ್ಲವ ಸಂಘದ ಉಪಾಧ್ಯಕ್ಷ ಮನೋಹರ್ ಕುಮಾರ್ ಇಳಂತಿಲ, ಬಂಟರ ಯುವ ವಿಭಾಗದ ನಿಕಟಪೂರ್ವ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ, ಕರ್ನಾಟಕ ನೃತ್ಯ ಅಕಾಡಮಿ ಸಂಸ್ಥಾಪಕ ರಾಜೇಶ್ ಕಣ್ಣೂರು ಮಾತನಾಡಿದರು.

ಕಾರ್ಯಕ್ರಮದಲ್ಲಿ ತಾ.‌ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ರಫ್ ಆಲಿಕುಂಞಿ ಮುಂಡಾಜೆ, ರಾಜಕೇಸರಿ ಬೆಳ್ತಂಗಡಿ ಅಧ್ಯಕ್ಷ ಕಾರ್ತಿಕ್ ಉಪಸ್ಥಿತರಿದ್ದರು.
ಅನುಗ್ರಹ ಜನಸೇವಾ ಕೇಂದ್ರದ ಸಂಸ್ಥಾಪಕ ತಲ್‌ಹತ್ ಎಂ.ಜಿ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು.
ರಾಜಕೇಸರಿ ಸಂಸ್ಥಾಪಕ ದೀಪಕ್ ಜಿ ಕಾರ್ಯಕ್ರಮ ಸಂಯೋಜಿಸಿದರು. ನವೀನ್ ಇಂದಬೆಟ್ಟು ವಂದಿಸಿದರು.‌

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 10 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ