ರಾಜಮೌಳಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ಕೊರೊನಾ ಸೋಂಕು ದೃಢ!

ಜನಪ್ರಿಯ ನಿರ್ದೇಶಕ ರಾಜಮೌಳಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ ಸ್ವತಃ ರಾಜಮೌಳಿ ಅವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ನಾನು ಮತ್ತು ನಮ್ಮ ಕುಟುಂಬದವರಿಗೆ ಕೆಲವು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ನಂತರದ ದಿನಗಳಲ್ಲಿ ಜ್ವರ ಅದಾಗಿಯೇ ಕಡಿಮೆ ಆಗಿದೆ. ಆದರೂ ಕೂಡ ನಾವು ಕೊರೊನಾ ತಪಾಸಣೆಗೆ ಒಳಗಾದ್ವಿ. ಅದರ ವರದಿ ಇಂದು ಬಂದಿದ್ದು, ಪಾಸಿಟಿವ್ ಇದೆ. ನಾವು ಈಗ ವೈದ್ಯರ ಸಲಹೆಯಂತೆ ಹೋಂ ಕ್ವಾರಂಟೀನ್​​ನಲ್ಲಿ ಇದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

READ ALSO