ರಾಮಮಂದಿರ ನಿರ್ಮಾಣ ಭೂಮಿ ಪೂಜೆ, ಕರಾವಳಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ, ಪೇಜಾವರ ಶ್ರೀ ಗಳಿಗೆ ಆಹ್ವಾನ

ಮಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ರಂದು ನಡೆಯುವ ಭೂಮಿ ಪೂಜೆ ಸಮಾರಂಭಕ್ಕೆ ರಾಜ್ಯದ ಐವರು ಆಹ್ವಾನಿತರಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಮತ್ತು ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಸೇರಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆಗೆ ಕ್ಷಣಗಣನೆ ಆರಂಭವಾಗಿದ್ದು, ಭರ್ಜರಿ ಸಿದ್ದತೆಗಳು ಜರುಗುತ್ತಿವೆ. ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ನಾನಾ ರಾಜ್ಯಗಳಿಂದ ಗಣ್ಯರನ್ನು ಆಹ್ವಾನಿಸುತ್ತಿದ್ದು, ಕರ್ನಾಟಕದ ಎಂಟು ಗಣ್ಯರಿಗೆ ವಿಶೇಷ ಆಹ್ವಾನ ನೀಡಲಾಗಿದೆ.

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಆಹ್ವಾನಿಸಲಾದ ಎಂಟು ಮಂದಿ ವಿಶೇಷ ಆಹ್ವಾನಿತರ ಪಟ್ಟಿ ಇಲ್ಲಿದೆ.

  1. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
  2. ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ,
  3. ಇಸ್ಕಾನ್ ನ ಮಧುಪಂಡಿತ ದಾಸ್,
  4. ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ,
  5. ಶೃಂಗೇರಿ ಮಠದ ವಿಧುಶೇಖರ ಭಾರತೀ ಸ್ವಾಮೀಜಿ,
  6. ಸುತ್ತೂರು ಮಠದ ಶ್ರೀಗಳು,
  7. ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ
  8. ಆರ್ಟ್ ಆಫ್ ಲಿವಿಂಗ್ ರವಿಶಂಕರ್ ಗುರೂಜಿ ಅಹ್ವಾನ ಪಡೆದ ಪ್ರಮುಖರಾಗಿದ್ದಾರೆ.

ಈಗಾಗಲೇ ರಾಜ್ಯದ ಎಲ್ಲಾ ನದಿಗಳು ಮತ್ತು ಧಾರ್ಮಿಕ ಸ್ಥಳಗಳಿಂದ ಅಯೋಧ್ಯೆಗೆ ಜಲ ಮತ್ತು ಮಣ್ಣು ಕಳುಹಿಸಲಾಗಿದೆ. ದೇವಾಲಯದ ಸ್ಥಳವನ್ನು ಪವಿತ್ರಗೊಳಿಸಲು ಜಲವನ್ನು ಬಳಸಲಾಗುತ್ತದೆ ಎಂದು ವಿಶ್ವಹಿಂದೂ ಪರಿಷತ್‍ ಪ್ರಚಾರ ಪ್ರಮುಖ್ ಬಸವರಾಜ್ ಹೇಳಿದ್ದಾರೆ.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಕಾವೇರಿ ಮತ್ತು ಕಪಿಲಾ ನದಿಗಳ ಜಲ ಕಳುಹಿಸಿದ್ದಾರೆ. ಧರ್ಮಸ್ಥಳ ಧರ್ಮಧಿಕಾರಿ ವೀರೇಂದ್ರ ಹೆಗ್ಗಡೆ ನೇತ್ರಾವತಿ ನದಿಯಿಂದ ನೀರನ್ನು ಕಳುಹಿಸಿದರೆ, ಶೃಂಗೇರಿ ಮಠದ ಶಂಕರಾಚಾರ್ಯ ಶ್ರೀ ಭಾರತಿ ತೀರ್ಥ ಸ್ವಾಮೀಜಿ ಅವರು ತುಂಗಾ, ಭದ್ರಾವತಿ ಮತ್ತು ಶರಾವತಿ ಜಲವನ್ನು ಕಳುಹಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಹಾಗೆಯೇ ಕೃಷ್ಣಾ, ಭೀಮ, ಮಲಪ್ರಭ ಮತ್ತು ಘಟಪ್ರಭದಂತಹ ಎಲ್ಲಾ ಪ್ರಮುಖ ನದಿಗಳಿಂದ ವಿವಿಧ ಮಠಾಧೀಶರು ಜಲವನ್ನು ಸಂಗ್ರಹಿಸಿ ಕಳುಹಿಸಿದ್ದಾರೆ.

ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ, ಉಡುಪಿಯಲ್ಲಿನ ಶ್ರೀ ಕೃಷ್ಣ ದೇವಸ್ಥಾನ, ಚಿಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ರಂಭಾಪುರಿ ದೇವಸ್ಥಾನ, ತುಮಕೂರಿನ ಸಿದ್ದಗಂಗ ಮಠ ಮತ್ತು ದತ್ತ ಪೀಠ ದೇವಾಲಯಗಳಿಂದ ಮಣ್ಣನ್ನು ಕಳುಹಿಸಲಾಗಿದೆ ಎಂದು ಬಸವರಾಜ್ ಹೇಳಿದ್ದಾರೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 5 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ