ನವದೆಹಲಿ : ದೇಶದಾದ್ಯಂತ ಎಲ್ಲಾ ಸಹಕಾರಿ ಬ್ಯಾಂಕುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ಅಧೀನಕ್ಕೆ ಒಳಪಡಿಸುವಂತೆ ಕೇಂದ್ರ ಸರಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.
ದೇಶದಲ್ಲಿ ಹಲವು ಸಹಕಾರಿ ಬ್ಯಾಂಕುಗಳು ಠೇವಣಿದಾರರಿಂದ ಹಣವನ್ನು ಸಂಗ್ರಹಿಸಿ ನಂತರದಲ್ಲಿ ವಂಚಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕೇಂದ್ರ ಸರಕಾರ ಸಹಕಾರಿ ಬ್ಯಾಂಕುಗಳಿಗೆ ಮೂಗುದಾರ ಹಾಕಿದಂತಾಗಿದೆ.
ದೇಶದಲ್ಲಿ ಸಹಕಾರಿ ಬ್ಯಾಂಕುಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಸುಗ್ರೀವಾಜ್ಞೆಯ ಮೂಲಕ ಸಹಕಾರಿ ಬ್ಯಾಂಕುಗಳನ್ನು ಆರ್ ಬಿ ಐ ವ್ಯಾಪ್ತಿಗೆ ಒಳಪಡಿಸಿದೆ. ಈ ಮೂಲಕ ದೇಶದಲ್ಲಿನ 1,540 ಸಹಕಾರಿ ಬ್ಯಾಂಕುಗಳು ಆರ್ ಬಿಐ ವ್ಯಾಪ್ತಿಗೆ ಒಳಪಡಲಿವೆ. ಸಹಕಾರಿ ಬ್ಯಾಂಕುಗಳಲ್ಲಿ ಸುಮಾರು 8.6 ಕೋಟಿಗೂ ಅಧಿಕ ಠೇವಣಿದಾರರಿದ್ದಾರೆ. ಕೇಂದ್ರ ಸರಕಾರದ ಈ ನಿರ್ಧಾರದಿಂದಾಗಿ ಠೇವಣಿದಾರರ ಹಣ ಸುರಕ್ಷಿತವಾಗಿರಲಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.