SSLC , PU ಪರೀಕ್ಷಾ ಫಲಿತಾಂಶ ಆಗಸ್ಟ್ ಮೊದಲ ವಾರದೊಳಗೆ ಪ್ರಕಟ: ಎಸ್.ಸುರೇಶ್ ಕುಮಾರ್

ಬೆಂಗಳೂರು: ಆಗಸ್ಟ್ ಮೊದಲ ವಾರದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಫಲಿತಾಂಶ ಹಾಗೂ ಜುಲೈ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಆನ್ ಲೈನ್ ಶಿಕ್ಷಣ ಪದ್ಧತಿ ಅನುಷ್ಟಾನಕ್ಕೆ ತರಲಾಗುವುದು. ಅದಕ್ಕೂ ಮೊದಲು ರಾಜ್ಯದ ಹಿನ್ನಲೆ ಗಮನದಲ್ಲಿ ಇಟ್ಟುಕೊಂಡು ಜೊತೆಗೆ ತಜ್ಞರ ಅಭಿಪ್ರಾಯ ಪಡೆದ ನಂತರ‌ ಯಾವ ರೀತಿಯಲ್ಲಿ ಆನ್ ಲೈನ್ ಶಿಕ್ಷಣ ‌ಜಾರಿಗೆ ತರಬೇಕು‌ ಎಂಬುದನ್ನು‌ ನಿರ್ಧರಿಸುತ್ತೇವೆ ಎಂದರು.

READ ALSO

ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿಪರೀಕ್ಷೆ‌ ಸುಸೂತ್ರವಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಕ್ಕಳ ಗೈರು ಹಾರಿಯಲ್ಲಿ‌ ಅಷ್ಟೊಂದು‌ ವ್ಯತ್ಯಾಸ‌ ಆಗಿಲ್ಲ. ಮಕ್ಕಳಿಗೆ‌ ಪರೀಕ್ಷಾ ಕೇಂದ್ರಗಳು ಸುರಕ್ಷಿತ ಕೇಂದ್ರಗಳಾಗಿವೆ. ಮಕ್ಕಳು‌ ಉತ್ಸಾಹದಿಂದ ಪರೀಕ್ಷೆ ಬರೆಯುತ್ತಿದ್ದಾರೆ ಎಂದರು.