ರಿಷಿ ಗಂಗಾ ಪವರ್ ಪ್ರಾಜೆಕ್ಟ್ ನಲ್ಲಿ ಬಿರುಕು! ಮುಳುಗುವ ಭೀತಿಯಲ್ಲಿ ಹಲವು ಜಿಲ್ಲೆಗಳು

ಉತ್ತರಾಖಂಡ: ಉತ್ತರ ಖಂಡದಲ್ಲಿ ಬಾರಿ ಹಿಮ ಕುಸಿತ ಹಿನ್ನೆಲೆ ದಿಢೀರ್ ಪ್ರವಾಹ ಉಂಟಾಗಿದೆ, ಧೌಲಿಗಂಗಾ ನದಿಯಲ್ಲಿ ಸಾಕಷ್ಟು ನೀರು ತುಂಬಿಕೊಂಡ ಹಿನ್ನೆಲೆಯಲ್ಲಿ ಪ್ರವಾಹ ಉಂಟಾಗಿದೆ.
ತಪೋವನ್ ಮೇಲಿರುವ ಅಣೆಕಟ್ಟು ಹೊಡೆದ ಪರಿಣಾಮ ತಗ್ಗು ಪ್ರದೇಶಗಳು ಮುಳುಗಿದ ಕಾರಣ ಬಾರಿ ಅನಾಹುತ ಸಂಭವಿಸಿದೆ.

ಚಮೋಲಿ ಜಿಲ್ಲೆಯ ತಪೋವನ ಪ್ರದೇಶದ ರೈನಿ ಗ್ರಾಮದ ರಿಷಿ ಗಂಗಾ ವಿದ್ಯುತ್ ಯೋಜನೆಯ ಬಳಿ ಭೂಕಂಪನ ಸಂಭವಿಸಿದ್ದು, ಪರಿಣಾಮವಾಗಿ ಉಂಟಾದ ಹಿಮಪಾತದಿಂದಾಗಿ ಇಲ್ಲಿ ಹರಿಯುತ್ತಿರುವ ಧೌಲಿಗಂಗಾ ನದಿಯಲ್ಲಿ ನೀರಿನ ಮಟ್ಟ ಹಠಾತ್ತನೆ ಏರಿಕೆಯಾಗಿದ್ದು, ಈ ಪ್ರದೇಶದಲ್ಲಿರುವ ಜನ ವಸತಿ ಪ್ರದೇಶಗಳು ಕೊಚ್ಚಿ ಹೋಗುವ ಆತಂಕ ಸೃಷ್ಟಿಯಾಗಿದೆ.

ನದಿ ದಂಡೆಯಲ್ಲಿ ವಾಸಿಸುತ್ತಿರುವ ಜನರನ್ನು ಸ್ಥಳಾಂತರಗೊಳಿಸಲು ಈಗಾಗಲೇ ಆದೇಶವನ್ನು ನೀಡಲಾಗಿದೆ ಎಂದು ಸ್ಥಳಕ್ಕೆ ಭೇಟಿ ನೀಡಿರುವ ಚಮೋಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಐಟಿಪಿಬಿಯ ಎರಡು ತಂಡಗಳು, ಮೂರು ಎನ್ ಡಿಆರ್ ಎಫ್ ತಂಡಗಳು ಡೆಹ್ರಾಡೂನ್ ನಿಂದ ಧಾವಿಸಿದೆ. ಇನ್ನೂ ಸ್ಥಳೀಯ ಭದ್ರತಾ ಸಂಸ್ಥೆಗಳು ಕೂಡ ಸ್ಥಳಕ್ಕೆ ಧಾವಿಸಿ ನದಿ ದಂಡೆಯಲ್ಲಿ ವಾಸಿಸುತ್ತಿರುವ ಜನರನ್ನು ಸ್ಥಳಾಂತರಿಸಲು ಮುಂದಾಗಿದೆ.

ಉತ್ತರಾಖಂಡದ ನಂದದೇವಿ ಹಿಮ ನದಿಯ ಒಂದು ಭಾಗ ಒಡೆದು ಹೋಗುವ ಸಾಧ್ಯತೆಗಳಿವೆ ಎಂದು ವಿಪತ್ತು ಎಚ್ಚರಿಕೆ ವರದಿ ಬಂದಿದ್ದು, ಹೀಗಾಗಿ ಗಂಗಾ ನದಿಯ ಪ್ರವಹಿಸುವ ಜಿಲ್ಲೆಗಳಲ್ಲಿಯೂ ಹೈಅಲಾರ್ಟ್ ಘೋಷಿಸಲಾಗಿದೆ. ನೀರಿನ ಮಟ್ಟವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕಿದೆ ಎಂದು ತಜ್ಞರು ಹೇಳಿದ್ದಾರೆ.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 15 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು