TRENDING
Next
Prev

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ! ಘನವಾಹನ ಸಂಚಾರ ಬಂದ್!

ಹಾಸನ: ಭಾರಿ ಮಳೆಯಿಂದಾಗಿ ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75 ಬಳಿ ಭೂಕುಸಿತವಾಗಿದೆ.

ಬೆಂಗಳೂರು ಹಾಗೂ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ನಿರಂತರ ಮಳೆಯಿಂದಾಗಿ ರಸ್ತೆ ಕುಸಿತ ಉಂಟಾಗಿದೆ. ಸದ್ಯ ಈ ಮಾರ್ಗದಲ್ಲಿ ಘನ ವಾಹನ ಸಂಚಾರ ಬಂದ್​ ಆಗಿದ್ದು, ಪ್ರಯಾಣಿಕರು ಪರ್ಯಾಯ ಮಾರ್ಗದ ಮೊರೆ ಹೋಗಿದ್ದಾರೆ. ಸದ್ಯ ಘಟನಾ ಸ್ಥಳದಲ್ಲಿ ರಸ್ತೆ ಸರಿಪಡಿಸುವ ಕಾರ್ಯಾಚರಣೆ ಆರಂಭಗೊಂಡಿದೆ.

READ ALSO