ಸುಳ್ಯ: ಸಂಪಾಜೆಯಲ್ಲಿ ಭೀಕರ ಅಪಘಾತವಾಗಿದ್ದು ಇಬ್ಬರಿಗೆ ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ನಾಲ್ವರು ಛಾಯಾಗ್ರಾಹಕರು ಮುಂಜಾನೆ 3ಗಂಟೆಯ ವೇಳೆಗೆ ಕರ್ತವ್ಯ ಮುಗಿಸಿ ಹೊನ್ನಾವರದಿಂದ ಮಂಡ್ಯಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಕೊಡಗಿನ ಸಂಪಾಜೆಯ ಬಳಿ ರಸ್ತೆ ರಕ್ಷಣಾಗೋಡೆಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಗಂಭೀರ ಗಾಯಗೊಂಡಿದ್ದು ಉಳಿದಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ