ಅಧಿಕಾರಿಗಳ ನೆರವಿನಿಂದ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ತಡೆಗಟ್ಟುವಂತೆ ಜಿಲ್ಲಾಧಿಕಾರಿಗೆ ಮಾಜಿ ಶಾಸಕ ವಸಂತ ಬಂಗೇರ ಮನವಿ

ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರ ರವರು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇ‌ಂದ್ರ ಯವರನ್ನು ಭೇಟಿಯಾಗಿ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಜಿಲ್ಲಾಧಿಕಾರಿಯವರನ್ನು ಭೇಟಿಯಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಶಾಸಕರು, ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ನಿರಂತರವಾಗಿ ನಡೆಯುತ್ತಿದ್ದು, ತಾಲೂಕಿನ ಆದಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರಲ್ಲಿ ಕೇಳಿಕೊಂಡಿರುವುದಾಗಿ ತಿಳಿಸಿದರು.

READ ALSO

ತಾಲೂಕಿನಲ್ಲಿ ಅಧಿಕಾರಿಗಳ ‌ನೆರವಿನೊಂದಿಗೆ ಅಕ್ರಮ ಚಟುವಟಿಕೆಗಳು ನಡೆಯುತ್ತಿದೆ ಎಂದು ಆರೋಪಿಸಿದ ಅವರು ಇದಕ್ಕೆ ಕಡಿವಾಣ ಹಾಕುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ರಂಜನ್ ಜಿ ಗೌಡ, ಶೈಲೇಶ್ ಕುಮಾರ್, ಮನೋಹರ ಕುಮಾರ್ ಇದ್ದರು.