ರಾಜ್ಯಾದ್ಯಂತ ಮಧ್ಯಪ್ರೀಯರಿಗೆ ಬಿಗ್ ಶಾಕ್! ಗ್ರಾ.ಪಂ ಚುನಾವಣಾ ಮತ ಎಣಿಕೆ ಹಿನ್ನೆಲೆ ನಾಳೆ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ

ಬೆಂಗಳೂರು: ಎರಡು ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ಯಶಸ್ವಿಯಾಗಿ ನಡೆದಿದ್ದು,ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಗಳಲ್ಲಿ ಭದ್ರವಾಗಿದೆ.ಗ್ರಾಮೀಣ ಭಾಗದಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿ ನಡೆಯುತ್ತಿದ್ದು, ಫ‌ಲಿತಾಂಶ ಹೊರ ಬೀಳಲು ಕೆಲವೇ ಗಂಟೆಗಳು ಬಾಕಿ ಉಳಿದಿವೆ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ-2020ರ ಸಂಬಂಧ ಎಲ್ಲಾ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಡಿಸೆಂಬರ್ 29 ರಂದು ಮಧ್ಯರಾತ್ರಿ 12 ಗಂಟೆಯಿಂದ ಡಿಸೆಂಬರ್ 30 ರ ಮಧ್ಯರಾತ್ರಿ 12 ಗಂಟೆಯವರೆಗೆ 144 ರಂತೆ ನಿಷೇಧಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳಲ್ಲಿ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಯಾವುದೇ ಮೆರವಣಿಗೆ, ವಿಜಯೋತ್ಸವ, ಬಹಿರಂಗ ಸಭೆ-ಸಮಾರಂಭಗಳನ್ನು ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಾಸ್ತಾ-ರೋಖ ಹಾಗೂ ಮುತ್ತಿಗೆ ನಡೆಸುವುದನ್ನು ನಿಷೇಧಿಸಲಾಗಿದೆ.

ಶಸ್ತ್ರಗಳು, ದೊಣ್ಣೆ, ಕತ್ತಿ, ಈಟಿ, ಗದೆ, ಬಂದೂಕು, ಚಾಕು, ಕೋಲು, ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಯಾವುದೇ ಸಂರಕ್ಷಾರ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ, ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕ ಸುವ್ಯಸವ್ಥೆಗೆ ಭಾದೆಯನ್ನುಂಟು ಮಾಡಬಹುದಾದ, ರಾಜ್ಯದ ಭದ್ರತೆಯನ್ನು ಕಡೆಗಣಿಸಬಹುದಾದ ಅಥವಾ ಅಪರಾಧವನ್ನು ಮಾಡಲು ಪ್ರಚೋಧಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಡ ನಿಷೇಧಿಸಲಾಗಿದೆ. ಹಾಡು, ಸಂಗೀತ, ಆವೇಶ ಭಾಷಣ, ಇಂಗಿತ ಸೂಚನೆಗಳು, ಅಂಕ ನಿರೂಪಣೆಗಳು, ಚಿತ್ರಗಳನ್ನು, ಸಂಕೇತಗಳನ್ನು ಭಿತ್ತಿ ಪತ್ರಗಳನ್ನು ಇತರ ಯಾವುದೇ ವಸ್ತು ಅಥವಾ ಪದಾರ್ಥವನ್ನು ತಯಾರಿಸುವುದು, ಪ್ರದರ್ಶಿಸುವುದನ್ನು ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿಯ ವೇಣೂರಿನಲ್ಲಿ ನದಿಯಲ್ಲಿ ಸ್ನಾನಕ್ಕೆ ಇಳಿದ ಮೂವರು ನೀರುಪಾಲು

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವೇಣೂರಿನ ಗೆಳೆಯನ ಮನೆಗೆ ಬಂದಿದ್ದ ಮೂವರು ಯುವಕರು ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. ಮೃತ ಯುವಕರು ಲಾರೆನ್ಸ್(21), ಸೂರಜ್ (19) ಹಾಗೂ ಜೈಸನ್ (19) ಎಂಬವರಾಗಿದ್ದಾರೆ. ಕಾರ್ಯಕ್ರಮದ ಹಿನ್ನಲೆಯಲ್ಲಿ…

    Spread the love

    ವೈವಿಧ್ಯಮಯ ಪುರಾತನ ವಸ್ತುಗಳ ಸಂಗ್ರಹ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಗರಿ

    ಬೆಳ್ತಂಗಡಿ:  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ತಮ್ಮ 76ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ನೇಮಕವಾಗಿದ್ದಾರೆ. ಕಳೆದ 50 ವರ್ಷಗಳಿಂದ  ಅತೀ ಹೆಚ್ಚು ಪಾರಂಪರಿಕ, ಸಾಂಸ್ಕೃತಿಕ ವಸ್ತುಗಳ ಸಂಗ್ರಹದ ಜತೆಗೆ…

    Spread the love

    You Missed

    ಬೆಳ್ತಂಗಡಿಯ ವೇಣೂರಿನಲ್ಲಿ ನದಿಯಲ್ಲಿ ಸ್ನಾನಕ್ಕೆ ಇಳಿದ ಮೂವರು ನೀರುಪಾಲು

    • By admin
    • November 27, 2024
    • 100 views
    ಬೆಳ್ತಂಗಡಿಯ ವೇಣೂರಿನಲ್ಲಿ ನದಿಯಲ್ಲಿ ಸ್ನಾನಕ್ಕೆ ಇಳಿದ ಮೂವರು ನೀರುಪಾಲು

    ವೈವಿಧ್ಯಮಯ ಪುರಾತನ ವಸ್ತುಗಳ ಸಂಗ್ರಹ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಗರಿ

    • By admin
    • November 25, 2024
    • 23 views
    ವೈವಿಧ್ಯಮಯ ಪುರಾತನ ವಸ್ತುಗಳ ಸಂಗ್ರಹ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಗರಿ

    “ಇದು ನಮ್ ಶಾಲೆ” ಚಿತ್ರ ನವೆಂಬರ್ 29ಕ್ಕೆ ಬಿಡುಗಡೆ

    • By admin
    • November 25, 2024
    • 23 views
    “ಇದು ನಮ್ ಶಾಲೆ” ಚಿತ್ರ ನವೆಂಬರ್ 29ಕ್ಕೆ ಬಿಡುಗಡೆ

    ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್

    • By admin
    • November 19, 2024
    • 54 views
    ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್

    ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

    • By admin
    • November 19, 2024
    • 153 views
    ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

    ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌

    • By admin
    • November 19, 2024
    • 89 views
    ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌