ಶನಿವಾರದ ದಿನ ಭವಿಷ್ಯ: ಯಾರಿಗೆಲ್ಲ ಇದೆ ಇಂದು ಶುಭಫಲ

ಮೇಷ

ತಾಳ್ಮೆಯಿಂದ ಕಾರ್ಯಸಿದ್ಧಿ. ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಎಚ್ಚರಿಕೆ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಮಹಿಳೆಯರು ಮಾತನಾಡುವುದಕ್ಕಿಂತ ಮೌನ ವಹಿಸುವುದು ಕ್ಷೇಮ.

ವೃಷಭ

ದೈನಂದಿನ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಆಸ್ತಿ ವಿಷಯದಲ್ಲಿ ಕಲಹ ಎದುರಾಗುವ ಸಾಧ್ಯತೆ. ನೌಕರಿಯಲ್ಲಿರುವವರಿಗೆ ವರ್ಗಾವಣೆಯಿಂದ ಸ್ಥಾನಪಲ್ಲಟ ಸಾಧ್ಯತೆ. ಅಮೂಲ್ಯ ವಸ್ತುಗಳ ಸಂಗ್ರಹಣೆ ಮಾಡಲಿದ್ದೀರಿ.

ಮಿಥುನ

ಆರ್ಥಿಕ ಅನುಕೂಲತೆಗಳು ಕೂಡಿಬರಲಿವೆ. ಮಕ್ಕಳಿಂದ ನೆಮ್ಮದಿ. ವಿದೇಶಪ್ರಯಾಣ ಯೋಗವೂ ಕಂಡುಬರುತ್ತಿದೆ. ದಿನನಿತ್ಯದ ಕೆಲಸಗಳಲ್ಲಿ ಉತ್ಸಾಹ. ಮಿತ್ರರ ಸಹಾಯ ಸಹಕಾರಗಳಿಂದಾಗಿ ವ್ಯಾಪಾರದಲ್ಲಿ ವೃದ್ಧಿ.

ಕಟಕ

ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ಗೃಹ ನಿರ್ಮಾಣ ಅಥವಾ ಖರೀದಿ ಸಾಧ್ಯತೆ. ಮಹಿಳೆಯರಿಗೆ ಸಾಮಾಜಿಕ ಗೌರವಾದರಗಳು ದೊರಕಲಿವೆ. ರಾಜಕೀಯದಲ್ಲಿ ಯಶಸ್ಸಿನ ಹೆಜ್ಜೆ ತುಳಿಯಲಿದ್ದೀರಿ.

ಸಿಂಹ

ವಿವಾಹಾಕಾಂಕ್ಷಿಗಳಿಗೆ ಸಂಬಂಧಗಳು ಕೂಡಿಬರುವ ಸಾಧ್ಯತೆ. ಹಲವಾರು ವೈಯಕ್ತಿಕ ಸಮಸೆಗಳನ್ನು ಪರಿಹರಿಸಿಕೊಳ್ಳುವಿರಿ. ನೂತನ ವಾಹನ ಖರೀದಿ ಮಾಡಲಿದ್ದೀರಿ.

ಕನ್ಯಾ

ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ತುರುಸಿನಿಂದ ತೊಡಗಿಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ಅತ್ಯಂತ ಜಾಗರೂಕತೆ ಅವಶ್ಯ. ಮಕ್ಕಳ ಆರೋಗ್ಯದ ಕಡೆ ತುಸು ಗಮನ ವಹಿಸುವುದು ಉತ್ತಮ.

ತುಲಾ

ದೂರಾಲೋಚನೆಯಿಂದ ಮಾಡಿದ ಕಾರ್ಯಗಳಲ್ಲಿ ಯಶಸ್ಸು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನ ಅಗತ್ಯ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಮೂಡಲಿದೆ. ದೂರಪ್ರಯಾಣ ಮಾಡದಿರುವುದು ಒಳಿತು.

ವೃಶ್ಚಿಕ

ಸಂತೃಪ್ತಿ ಸಾಂಸಾರಿಕ ಜೀವನ ನಿಮ್ಮದಾಗಲಿದೆ. ಮಹಿಳೆಯರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಸಾಧ್ಯತೆ.

ಧನು

ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ಅಗತ್ಯ. ಜಂಟಿ ವ್ಯವಹಾರಗಳಿಗೆ ಕೈ ಹಾಕದಿರುವುದು ಉತ್ತಮ. ಬಂಧು ಮಿತ್ರರೊಂದಿಗೆ ಶುಭಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ. ದೈನಂದಿನ ವ್ಯವಹಾಗಳಲ್ಲಿ ಸಂತಸ.

ಮಕರ

ಬಹುಕಾಲದ ಬಯಕೆಗಳು ಈಡೇರಲಿವೆ. ಋಣ ಪರಿಹಾರದಿಂದಾಗಿ ಸಂತೃಪ್ತಿ. ವೈಯಕ್ತಿಕ ವಿಚಾರಗಳನ್ನು ಬಹಿರಂಗಪಡಿಸದೆ ಗುಪ್ತವಾಗಿರಿಸುವುದು ಕ್ಷೇಮ. ವಸ್ತ್ರ, ಹತ್ತಿ, ನಾರಿನ ಪದಾರ್ಥಗಳ ವ್ಯಾಪಾರದಿಂದ ಹೆಚ್ಚಿನ ಆದಾಯ.

ಕುಂಭ

ಉದ್ಯೋಗದಲ್ಲಿರುವವರಿಗೆ ಮೇಲಧಿಕಾರಿಗಳ ಪ್ರೋತ್ಸಾಹದೊಂದಿಗೆ ಪ್ರಶಂಸೆಗಳು ಹರಿದುಬರಲಿವೆ. ಮಹಿಳೆಯರ ಇಷ್ಟಾರ್ಥಗಳು ಈಡೇರಿ ಸಂತಸ. ಆರ್ಥಿಕ ಸಂಪನ್ಮೂಲಗಳು ಅಭಿವೃದ್ಧಿಯಾಗಲಿವೆ.

ಮೀನ

ಮಕ್ಕಳೊಂದಿಗೆ ವಾದ ವಿವಾದ ಮಾಡದಿರುವುದು ಉತ್ತಮ. ಮಿತ್ರರಿಂದ ಸಹಕಾರ ಸಲಹೆಗಳು ಲಭ್ಯವಾಗಲಿವೆ. ವಾಹನ ಚಾಲನೆ, ಸ್ತ್ರೀಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ.

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆಯು 07/02/2026 ಶನಿವಾರದಿಂದ 10/02/2026ಮಂಗಳವಾರದವರೆಗೆ ನಡೆಯಲಿದೆ. Spread the love

    Spread the love

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 62 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 306 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 103 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 97 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 89 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 69 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️