ರಾಜ್ಯದಲ್ಲಿ ನಡೆದ 545 ಪೋಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಮಹತ್ವದ ಹೇಳಿಕೆ ಕೊಟ್ಟ ಡಿಜಿ ಐಜಿಪಿ

ಬೆಂಗಳೂರು: ಕರ್ನಾಟಕದಲ್ಲಿ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿ ಅಕ್ರಮ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ ಐಜಿಪಿ ಕಚೇರಿಯಿಂದ ಅಧಿಕೃತ ಪತ್ರಿಕಾ ಹೇಳಿಕೆ ಬಿಡುಗಡೆಯಾಗಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕರಾದಂತ ಪ್ರವೀಣ್ ಸೂದ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು,545 ಪಿಎಸ್‌ಐ ಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯನ್ನು ದಿನಾಂಕ 03-10-2021 ರಂದು ರಾಜ್ಯಾದ್ಯಂತ 92 ಕೇಂದ್ರಗಳಲ್ಲಿ ನಡೆಸಲಾಯಿತು. ಈ ಪರೀಕ್ಷೆಗೆ 54,104 ಅಭ್ಯರ್ಥಿಗಳು ಹಾಜರಾಗಿದ್ದರು. ಫಲಿತಾಂಶ ಪ್ರಕಟಣೆಯ ನಂತರ ಕೆಲವು ವ್ಯತ್ಯಾಸಗಳು ವರದಿಯಾದ ಮೇರೆಗೆ ಆಂತರಿಕ ವಿಚಾರಣೆ ನಡೆಸಲಾಯಿತು ಎಂದಿದ್ದಾರೆ.

ದಿನಾಂಕ 07-04-2022 ರಂದು ಕೆಲವು ದುಷ್ಕೃತ್ಯಗಳ ಬಗ್ಗೆ ಪುರಾವೆಗಳು ಕಂಡು ಬಂದಿದ್ದರಿಂದ, ಗೃಹ ಸಚಿವರು ಸ್ವತಹ ಸಂಪೂರ್ಣ ನೇಮಕಾತಿ ಪ್ರಕ್ರಿಯೆ ಮತ್ತು ಅಪಾದಿತ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಲು ಸಿಐಡಿಗೆ ಅದೇಶಿಸಿದರು. ಅದರಂತೆ 09-04-2022ರಂದು ಎಫ್‌ಐಆರ್ ದಾಖಲಿಸಿಲಾಗಿದೆ. ಇದುವರೆಗೆ 7 ಜನರನ್ನು ಬಂಧಿಸಲಾಗಿದೆ. ಇದರಲ್ಲಿ ನಾಲ್ವರು ಪರೀಕ್ಷೆ ಬರೆದಂತ ಅಭ್ಯರ್ಥಿಗಳು, ಇನ್ನುಳಿದ ಮೂವರು ಕಲಬುರ್ಗಿ ಕೇಂದ್ರದ ಮೇಲ್ವಿಚಾರಕರು ಸೇರಿದ್ದಾರೆ. ಇನ್ನೂ ಹಲವರು ತಲೆಮರೆಸಿಕೊಂಡಿದ್ದು, ಶೀಘ್ರದಲ್ಲೇ ಬಂಧಿಲಾಗುವುದು ಎಂದು ಹೇಳಿದ್ದಾರೆ. ತನಿಖೆಯನ್ನು ನಿಷ್ಪಕ್ಷಪಾತವಾಗಿ ಮತ್ತು ಸಮಗ್ರವಾಗಿ ಶೀಘ್ರ ಗತಿಯಲ್ಲಿ ಪೂರ್ಣಗೊಳಿಸಲು ಗೃಹ ಸಚಿವರು ಸಿಐಡಿಗೆ ಆದೇಶಿಸಿದ್ದಾರೆ. ತನಿಖೆ ಪೂರ್ಣಗೊಂಡ ನಂತರ, ಅಂತಿಮ ವರದಿ ಆಧಾರದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಯಾವುದೇ ಅಭ್ಯರ್ಥಿಗಳು ಪರೀಕ್ಷಾ ಮೇಲ್ವಿಚಾರಕರು ಮತ್ತು ಸಹಾಯಕ ಸಿಬ್ಬಂದಿ ಭಾಗಿಯಾಗಿದ್ದಲ್ಲಿ, ಕಾನೂನಿನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಸಿಐಡಿ(CID) ತನಿಖೆ ಚುರುಕು:
545 ಪಿಎಸೈ ನೇಮಕ ಪರೀಕ್ಷೆಯಲ್ಲಿ ಅಕ್ರಮ ಆರೋಪಗಳ ಕುರಿತ ಸಿಐಡಿ ತನಿಖೆ ಚುರುಕುಗೊಂಡಿದೆ. ಆಯ್ಕೆ ಪಟ್ಟಿಯಲ್ಲಿ ಹೆಸರಿದ್ದ ಮೂವರು ಅಭ್ಯರ್ಥಿಗಳು ಹಾಗೂ ಪರೀಕ್ಷಾ ಕೇಂದ್ರದ ಮೂವರು ಮೇಲ್ವಿಚಾರಕರು ಸೇರಿದಂತೆ ಒಟ್ಟು 6 ಜನರನ್ನು ಬಂಧಿಸಿ, ಶನಿವಾರ ಕಲಬುರಗಿಯ ಜೆಎಂಎಫ್‌ಸಿ ಕೋರ್ಟಿಗೆ ಹಾಜರುಪಡಿಸಿದ್ದಾರೆ.

ರಾಯಚೂರು ಮೂಲದ ಕೆ.ಪ್ರವೀಣ ಕುಮಾರ್‌, ಕಲಬುರಗಿ ಜಿಲ್ಲೆ ಆಳಂದ ನಿವಾಸಿ ಎನ್‌.ಚೇತನ್‌ ಹಾಗೂ ಕಲಬುರಗಿ ನಗರದ ಹಾಲ್‌ ಸುಲ್ತಾನಪುರ ಪ್ರದೇಶದ ಅರುಣ ಪಾಟೀಲ್‌ ಅಭ್ಯರ್ಥಿಗಳಾದರೆ, ಜ್ಞಾನಜ್ಯೋತಿ ಇಂಗ್ಲೀಷ್‌ ಮೀಡಿಯಂ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸಿದ್ದ ಸುಮಾ, ಸಿದ್ಧಮ್ಮ ಹಾಗೂ ಸಾವಿತ್ರಿ ಎನ್ನುವವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ. ಬಂಧಿತ ಮೂವರು ಅಭ್ಯರ್ಥಿಗಳಲ್ಲೊಬ್ಬ ಕಲ್ಯಾಣ ಕರ್ನಾಟಕ ಜಿಲ್ಲೆಯೊಂದರ ಕಾರಾಗೃಹದ ವಾರ್ಡನ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.

ಈ ಪ್ರಕರಣದಲ್ಲಿ, ಮೊದಲು ಬಂಧಿಸಲಾಗಿದ್ದ ವೀರೇಶ್‌ ಸೇರಿದಂತೆ ಈವರೆಗೆ 7 ಜನರನ್ನು ಸಿಐಡಿ ಪೊಲೀಸರು ಬಂಧಿಸಿದಂತಾಗಿದೆ. ಸಿಐಡಿ ತನಿಖೆ ವಿಸ್ತಾರಗೊಳ್ಳುತ್ತಿದ್ದಂತೆ, ಪ್ರಕರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ಕೆಲವರು ನಾಪತ್ತೆಯಾಗಿದ್ದಾರೆ. ಆರ್‌ಟಿ​ಐ ಕಾರ್ಯಕರ್ತನೊಬ್ಬನ ಚಲನವಲನಗಳ ಮೇಲೂ ಪೊಲೀಸರು ನಿಗಾ ಇಟ್ಟಿದ್ದಾರೆ.

ಇನ್ನು ಯಾದಗಿರಿಯ ವ್ಯಕ್ತಿಯೊಬ್ಬನ ವಿಚಾರಣೆಗೆಂದು ಆತನ ಗ್ರಾಮಕ್ಕೆ ತೆರಳಿದ್ದ ತನಿಖಾ ತಂಡ ಮಾಹಿತಿಗಳ ಜಾಲಾಡಿ ಬಂದಿದೆ. ಕೊನೆಗೆ, ಫೋನ್‌ ಮೂಲಕ ಸಂಪರ್ಕಕ್ಕೆ ಬಂದಿದ್ದ ಆತ, ಮರುದಿನವೇ ಎಲ್ಲ ದಾಖಲೆಗಳನ್ನು ನೀಡುವುದಾಗಿ ಹೇಳಿದ್ದನಾದರೂ, ಇದೀಗ ಸಂಪರ್ಕಕ್ಕೆ ಸಿಗದಿರುವುದು ಮತ್ತಷ್ಟೂ ಅನುಮಾನಗಳಿಗೆ ಕಾರಣವಾಗಿದೆ.

Spread the love
 • Related Posts

  ಉಜಿರೆಯ ಕಾಲೇಜು ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಕನ್ನ 3.14ಲಕ್ಷ ನಗದು ನಾಪತ್ತೆ!!!

  ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆಯ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆಯ ಯಿಂದ ಅಪರಿಚಿತರು 3.14 ಲಕ್ಷ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಉಜಿರೆ ಬಿ.ಎನ್.ವೈ ಎಸ್ ಕಾಲೇಜಿನಲ್ಲಿ ಮೂರನೇ ವರ್ಷದ ವಿದ್ಯಾರ್ಥಿ…

  Spread the love

  ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ,ಡಿ.ಸಿಎಂ ಭೇಟಿ

  ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶನಿವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಅವರೊಂದಿಗೆ ಮಾತುಕತೆ ನಡೆಸಿದರು. ಸರಕಾರಕ್ಕೆ…

  Spread the love

  Leave a Reply

  Your email address will not be published. Required fields are marked *

  You Missed

  ಉಜಿರೆಯ ಕಾಲೇಜು ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಕನ್ನ 3.14ಲಕ್ಷ ನಗದು ನಾಪತ್ತೆ!!!

  • By admin
  • May 26, 2024
  • 3 views
  ಉಜಿರೆಯ ಕಾಲೇಜು ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಕನ್ನ 3.14ಲಕ್ಷ ನಗದು ನಾಪತ್ತೆ!!!

  ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ,ಡಿ.ಸಿಎಂ ಭೇಟಿ

  • By admin
  • May 25, 2024
  • 5 views
  ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ,ಡಿ.ಸಿಎಂ ಭೇಟಿ

  ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರಿಗೆ ಜಾಮೀನಿನಲ್ಲಿ ಬಿಡುಗಡೆ

  • By admin
  • May 22, 2024
  • 6 views
  ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರಿಗೆ ಜಾಮೀನಿನಲ್ಲಿ ಬಿಡುಗಡೆ

  ಬೆಳ್ತಂಗಡಿ ಠಾಣೆಗೆ ವಿಚಾರಣೆಗಾಗಿ ಹಾಜರಾದ ಶಾಸಕ ಹರೀಶ್ ಪೂಂಜಾ

  • By admin
  • May 22, 2024
  • 7 views
  ಬೆಳ್ತಂಗಡಿ ಠಾಣೆಗೆ ವಿಚಾರಣೆಗಾಗಿ ಹಾಜರಾದ ಶಾಸಕ ಹರೀಶ್ ಪೂಂಜಾ

  ವಿಚಾರಣೆ ನೆಪದಲ್ಲಿ ಶಾಸಕರನ್ನು ವಶ ಪಡಿಸಿಕೊಳ್ಳಲು ಬಂದ ಪೋಲೀಸ್ ಅಧಿಕಾರಿಗಳು ಬರಿಗೈಯಲ್ಲಿ ವಾಪಾಸು

  • By admin
  • May 22, 2024
  • 9 views
  ವಿಚಾರಣೆ ನೆಪದಲ್ಲಿ ಶಾಸಕರನ್ನು ವಶ ಪಡಿಸಿಕೊಳ್ಳಲು ಬಂದ ಪೋಲೀಸ್ ಅಧಿಕಾರಿಗಳು ಬರಿಗೈಯಲ್ಲಿ ವಾಪಾಸು

  ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬಂಧನಕ್ಕೆ ಸಿದ್ಧತೆ ನಡೆಸಿದ ಪೋಲೀಸ್ ಅಧಿಕಾರಿಗಳು

  • By admin
  • May 22, 2024
  • 7 views
  ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬಂಧನಕ್ಕೆ ಸಿದ್ಧತೆ ನಡೆಸಿದ ಪೋಲೀಸ್ ಅಧಿಕಾರಿಗಳು