“ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

ಉಜಿರೆ: ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ, ಶಾಲೆಯ ಪರಿಸರದಲ್ಲಿ ಇಂಗು ಗುಂಡಿಗಳ ನಿರ್ಮಾಣದಿಂದ ಸುತ್ತಲಿನ ಪರಿಸರಕ್ಕೆ ಪ್ರಯೋಜನವಾಗಿದೆ ಮತ್ತು ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿಯ ಅರಿವು ಮೂಡಿದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ರಾಮ್ ಕುಮಾರ್ ಮಾತನಾಡಿ ವಿದ್ಯಾರ್ಥಿ ದೆಸೆಯಲ್ಲಿ ಗಿಡಗಳನ್ನು ನೆಡುವುದು, ಸ್ವಚ್ಛತೆಯನ್ನು ಕಾಪಾಡುವುದು, ನೀರನ್ನು ಇಂಗಿಸುವ ಕಾರ್ಯಗಳನ್ನು ಕೈಗೊಂಡಾಗ ಮುಂದಿನ ಪೀಳಿಗೆಗೆ ಪರಿಸರವನ್ನು ಉಳಿಸಬಹುದು ಎಂದರು.

ಶೌರ್ಯ ವಿಪತ್ತು ತಂಡದ ಸದಸ್ಯರಾದ ಸುಲೇಮಾನ್ ಭೀಮಂಡೆ ಮಾತನಾಡಿ ಪರಿಸರ ಸಂರಕ್ಷಣೆ ಎನ್ನುವುದು ಒಂದು ದಿನದ ಕಾರ್ಯಕ್ರಮವಾಗದೆ ಅದು ನಿರಂತರವಾಗಿರಲಿ ಎಂದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮಿಂದಲೇ ಆಗಬೇಕು ಪರಿಸರದ ಜೊತೆಗೆ ಹೊಂದಾಣಿಕೆ ಬದುಕು ರೂಡಿಸಿಕೊಳ್ಳಬೇಕು ಎಂದರು.

ವೇದಿಕೆಯಲ್ಲಿ ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷರಾದ ರತ್ನಾಕರ ಆಚಾರ್ಯ, ನಿಕಟ ಪೂರ್ವ ಅಧ್ಯಕ್ಷರಾದ ಸಂಜೀವ ಗೌಡ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡಿದ್ದು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.

ಶಿಕ್ಷಕಿ ಕೋಕಿಲ ಬಹುಮಾನ ಪಟ್ಟಿ ವಾಚಿಸಿದರು. ಶಿಕ್ಷಕ ಕಿರಣ್ ಸ್ವಾಗತಿಸಿ, ಉಜಿರೆ ವಲಯದ ಮೇಲ್ವಿಚಾರಕರಾದ ಪ್ರೇಮ್ ಪ್ರಸಾದ್ ವಂದಿಸಿದರು. ಶಿಕ್ಷಕ ಸುಮನ್ ಯು. ಎಸ್ ಕಾರ್ಯಕ್ರಮ ನಿರೂಪಿಸಿದರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 12 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 10 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 16 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ