ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಭಾಸ್ಕರ ಹೆಗಡೆಯವರಿಗೆ ಪಿ.ಎಚ್.ಡಿ ಪದವಿ

ಉಜಿರೆ: ಉಜಿರೆಯ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಭಾಸ್ಕರ ಹೆಗಡೆ ಅವರಿಗೆ ಮಂಗಳೂರು ವಿಶ್ವವಿದ್ಯಾಲಯವು ಪಿ.ಎಚ್.ಡಿ ಪದವಿ ನೀಡಿದೆ.

ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಜಿ.ಪಿ.ಶಿವರಾಂ ಅವರ ಮಾರ್ಗದರ್ಶನದಲ್ಲಿ ‘ಪತ್ರಿಕೆಗಳ ಮೂಲಕ ಔಪಚಾರಿಕ ಶಿಕ್ಷಣ: ಕನ್ನಡ ಪ್ರಮುಖ ದೈನಿಕಗಳ ತೌಲನಿಕ ಅಧ್ಯಯನ’ ಶೀರ್ಷಿಕೆಯಲ್ಲಿ ಪಿ.ಎಚ್.ಡಿ ಮಹಾಪ್ರಬಂಧವನ್ನು ಸಲ್ಲಿಸಿದ್ದರು.

READ ALSO

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಾಳಕೋಡು ಗ್ರಾಮದವರಾದ ಭಾಸ್ಕರ ಹೆಗಡೆ ಅವರು ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.