ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತರಾದ ಗುರುರಾಜ ಪೂಜಾರಿ ಯವರನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದಿಸಲಾಯಿತು

ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತರಾದ ಗುರುರಾಜ ಪೂಜಾರಿಯವರನ್ನು ಹಾಗೂ ಉಜಿರೆ ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಗೌರವಿಸಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿದರು. ವಿದ್ಯಾರ್ಥಿಗಳು ಅವಕಾಶಗಳ ಸದುಪಯೋಗ ಪಡೆದು ಉತ್ತಮ ಚಾರಿತ್ರ್ಯ ಮೈಗೂಡಿಸಿಕೊಂಡು ಆದರ್ಶ ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳಬೇಕು. ಸಭ್ಯ, ಸುಸಂಸ್ಕೃತ ನಾಗರಿಕರಾಗಿ ರೂಪುಗೊಳ್ಳಬೇಕು. ಜ್ಞಾನ ಸಂಗ್ರಹವೇ ಶಿಕ್ಷಣದ ಗುರಿಯಲ್ಲ ಎಂದು ಕಿವಿಮಾತು ಹೇಳಿದರು. ವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪ್ರೋತ್ಸಾಹಿಸುವುದೇ ಸಾಧಕರ ಸನ್ಮಾನದ ಉದ್ದೇಶ. ಪ್ರಾಥಮಿಕ ಶಾಲಾ ಹಂತದಿಂದಲೇ ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರವನ್ನು ಗುರುತಿಸಿ ಕಠಿಣ ಪರಿಶ್ರಮ ಮತ್ತು ನಿರಂತರ ಅಭ್ಯಾಸದೊಂದಿಗೆ ಉನ್ನತ ಸಾಧನೆ ಮಾಡಬೇಕು. ದೇವರು ಅಗೋಚರವಾಗಿ ನಮ್ಮ ಎಲ್ಲ ಚಟುವಟಿಕೆಗಳನ್ನು ಗಮನಿಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಕಾರ್ಯಕ್ಷೇತ್ರದಲ್ಲಿ ಸತ್ಯ, ಧರ್ಮ, ನ್ಯಾಯ, ನೀತಿಯ ಪರಿಪಾಲನೆಯೊಂದಿಗೆ ಪ್ರಾಮಾಣಿಕ ವ್ಯವಹಾರ ನಡೆಸಬೇಕು. ಆತ್ಮಸಾಕ್ಷಿಗೆ ಸರಿಯಾಗಿ ಕರ್ತವ್ಯ ಮಾಡಬೇಕು ಎಂದರು.

ಕಾಮನ್ವೆಲ್ತ್ ಪದಕ ವಿಜೇತರಾದ ಗುರುರಾಜ್ ಪೂಜಾರಿ

ಶಾಸಕ ಹರೀಶ್ ಪೂಂಜ ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ತಮ್ಮ ಆಸಕ್ತಿಯ ಕ್ಷೇತ್ರವನ್ನು ಗುರುತಿಸಿಕೊಂಡು ಪ್ರಬಲ ಇಚ್ಛಾಶಕ್ತಿಯೊಂದಿಗೆ ನಿರಂತರ ಅಭ್ಯಾಸ, ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಪ್ರಯತ್ನಿಸಿದಲ್ಲಿ ಉನ್ನತ ಸಾಧನೆಯೊಂದಿಗೆ ಯಶಸ್ಸು ಪಡೆಯಬಹುದು ಎಂದರು.

READ ALSO

ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಉಜಿರೆ ಎಸ್‌ಡಿಎಂ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತ ಗುರುರಾಜ ಪೂಜಾರಿ ಅವರನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಗೌರವಿಸಲಾಯಿತು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಗುರುರಾಜ ಪೂಜಾರಿ, ಎಸ್‌ಡಿಎಂ ಕಾಲೇಜಿನಲ್ಲಿ ಪಡೆದ ತರಬೇತಿ ಪ್ರೋತ್ಸಾಹ ಮತ್ತು ಮಾರ್ಗದರ್ಶನವನ್ನು ಸ್ಮರಿಸಿದರು ಕಾಲೇಜಿನ ಉಪಪ್ರಾಂಶುಪಾಲ ಡಾ.ಎ.ಜಯಕುಮಾ ಯುಟ್ಯೂಬ್ ಶೆಟ್ಟಿ ವಾರ್ಷಿಕ ವರದಿ ಮಂಡಿದರು. ಕಾಲೇಜು ಪ್ರಾಂಶುಪಾಲ ಡಾ.ಪಿ.ಎನ್.ಉದಯಚಂದ್ರ ಸ್ವಾಗತಿಸಿದರು. ಕಲಾ ವಿಭಾಗದ ಡೀನ್ ಡಾ.ಶಲೀಪ್ ಕುಮಾರಿ ವಂದಿಸಿದರು. ಡಾ.ಬಿ.ಎ.ಕುಮಾರ್ ಹೆಗ್ಡೆ, ಡಾ.ಚಿತ್ರಾ, ಮತ್ತುಡಾ ನೆಫಿಸೆತ್ ಕಾರ್ಯಕ್ರಮ ನಿರೂಪಿಸಿದರು.