ಉಜಿರೆ ಮತ ಎಣಿಕೆ ಕೇಂದ್ರದ ಬಳಿ ಪಾಕಿಸ್ತಾನದ ಪರ ಘೋಷಣೆ ಕೂಗಿದ SDPI

ಬೆಳ್ತಂಗಡಿ: ಉಜಿರೆಯಲ್ಲಿ ಇಂದು ನಡೆಯುತ್ತಿರುವ ಗ್ರಾಮ ಪಂಚಾಯತ್ ಚುನಾವಣೆಯ ಮತಎಣಿಕೆ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಸದ್ದು ಮೊಳಗಿದೆ.

SDPI ಪಕ್ಷ ತನ್ನ ವಿಜಯೋತ್ಸವದ ಸಮಯದಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು‌ ಸಾರ್ವಜನಿಕವಾಗಿ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು.

READ ALSO

ಈ ವೇಳೆ ಸ್ಥಳದಲ್ಲಿ‌ ನೂಕು ನುಗ್ಗಲು‌ ಅರಂಭವಾಯಿತು. ತದ ನಂತರ ಪೊಲೀಸರು ಮಧ್ಯಪ್ರವೇಶಿಸಿ ದೇಶವಿರೋಧಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗಿದೆ.