ಮಂಗಳೂರು: ಸಮುದ್ರದ ಅಬ್ಬರಕ್ಕೆ ಸೋಮೇಶ್ವರ, ಉಚ್ಚಿಲ, ಬಟ್ಟಂಪಾಡಿ ಭಾಗದಲ್ಲಿ ರಸ್ತೆಗಳು ಕೊಚ್ಚಿಹೋಗಿದೆ. ರಸ್ತೆ ಸಂಪರ್ಕ ಕಡಿತಗೊಂಡಿರುವ ಕಾರಣ ಅಪಾಯದಲ್ಲಿ ಹಲವು ಮನೆಗಳು ಸಿಲುಕಿದ್ದು ಸಂಚಾರಕ್ಕಾಗಿ ಗ್ರಾಮಸ್ಥರ ಪರದಾಟ ನಡೆಸುವಂತಾಗಿದೆ.
ಸ್ಥಳಕ್ಕೆ ಸೋಮೇಶ್ವರ ಪುರಸಭೆ ಪೌರಾಯುಕ್ತೆ ವಾಣಿ ಆಳ್ವ ನೇತೃತ್ವದ ನಿಯೋಗ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.