ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

ಬೆಳ್ತಂಗಡಿ: ಎಂ.ಆ‌ರ್.ಪಿ.ಎಲ್, ನ ಸಿ.ಎಸ್.ಆರ್.
ಅನುದಾನದಲ್ಲಿ ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ ಧರ್ಮಸ್ಥಳ ಕನ್ಯಾಡಿಯ ಸೇವಾನಿಕೇತನದಲ್ಲಿ ಡಿ.4ರಂದು ನಡೆಯಿತು.
ನೂತನ ಕಾರ್ಯಾಲಯವನ್ನು ಆರ್.ಎಸ್.ಎಸ್.ನ ಪ್ರಾಂತ ಸಂಯೋಜಕ ಸುಬ್ರಾಯ ನಂದೋಡಿ ಉದ್ಘಾಟಿಸಿ ಶುಭ ಹಾರೈಸಿದರು.

ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್ ಮಾತನಾಡಿ ಸೇವಾನಿಕೇತನ ಕಟ್ಟಡ ನಿರ್ಮಾಣಕ್ಕೆ 10 ಲಕ್ಷ ಧನಸಹಾಯ ಘೋಷಣೆ ಮಾಡಿದರು. ಯಾವುದೇ ಪಲಾಪೇಕ್ಷೆ ಇಲ್ಲದೆ ಸೇವೆ ಮಾಡುವುದು ಹೇಗೆ ಎಂಬುದನ್ನು ಇಲ್ಲಿ ನೋಡಬಹುದು ಇದು ಒಂದು ಮಾದರಿ ಸಂಸ್ಥೆಯಾಗಿದ್ದು ಎಲ್ಲರೂ ಬೆಂಬಲ ಪ್ರೊತ್ಸಾಹ ನೀಡಬೇಕು ಎಂದರು.
ವಾರ್ಷಿಕ ವರದಿಯನ್ನು ಶಾಸಕ ಹರೀಶ್ ಪೂಂಜ ಬಿಡುಗಡೆ ಮಾಡಿ ಮಾತನಾಡಿ ಜೀವನಕ್ಕೆ ಶಕ್ತಿ ತುಂಬುವ ಕಾರ್ಯವನ್ನು ಸೇವಾ ಭಾರತಿ ಮಾಡುತ್ತಿದೆ. ಸಂಸ್ಥೆಯ ಚಟುವಟಿಕೆಗಳಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಸೇವಾ ಭಾರತಿಯ ಅಧ್ಯಕ್ಷೆ ಸ್ವರ್ಣಗೌರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೆ/ಕೃಷ್ಣ ಭಟ್, ಎಂ.ಕೆ. ರಾವ್, ಮುಂಬೈಯ ಕ್ಯಾಪ್ರಿಕಾರ್ನ್ ಅಗ್ರಿಫಾರ್ಮಸ್ ಡೆವಲಪರ್ಸ್‌ನ ಚೀಫ್ ಅಕೌಂಟೆಂಟ್ ಕೆ. ವಿಷ್ಣುಮೂರ್ತಿ ರಾವ್, ಸೇವಾಧಾಮದ ಸಂಚಾಲಕ ಕೆ. ಪುರಂದರ ರಾವ್, ಕನ್ಯಾಡಿ ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ಮಮತಾ, ಸೇವಾಭಾರತಿ ಆರೋಗ್ಯ ಯೋಜನೆಯ ಸಂಚಾಲಕ ಅಖಿಲೇಶ್ ಶೆಟ್ಟಿ, ಧಾರ್ಮಿಕ ಮುಖಂಡ ಕಿರಣ್ ಚಂದ್ರ, ಎಂ. ಕೆ ರಾವ್, ಉಪಸ್ಥಿತರಿದ್ದರು
ಕಾರ್ಯಕ್ರಮದಲ್ಲಿ ಈವರೆಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರಿಗೆ ಸೇವಾನಿಕೇತನ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸಿದ ಸಿಬ್ಬಂದಿಗಳಿಗೆ, ಎರಡು ವರ್ಷಗಳಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆನ್ಸೆನ್‌ನಲ್ಲಿ ಭಗವದ್ಗೀತೆ ಅಭ್ಯಾಸ ಮಾಡಿಸಿದ ಗುರುಗಳಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಬೆನ್ನುಹುರಿ ಅಪಘಾತ ಮತ್ತು ನಿರ್ವಹಣೆ ಜಾಗೃತಿಗಾಗಿ ತಯಾರಿಸಿದ ಪೋಸ್ಟ‌ರ್ ಬಿಡುಗಡೆ ಮಾಡಲಾಯಿತು

ಸಂಸ್ಥಾಪಕ ಕೆ. ವಿನಾಯಕ್ ರಾವ್ ಪ್ರಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಸೇವಾಭಾರತಿ ಟ್ರಸ್ಟಿ ಪೃಥ್ವಿಶ ಹಾಗೂ ರಚನಾ ನಿರೂಪಣೆ ಮಾಡಿದರು. ಜಯರಾಜ್ ಸಾಲಿಯಾನ್ ವಂದಿಸಿದರು.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 4 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ