ಶಕ್ತಿ ಯೋಜನೆಯಲ್ಲಿ ಉಚಿತ ಪ್ರಯಾಣಕ್ಕೂ ಸಿಗಲಿದೆ ಟಿಕೆಟ್

ಬೆಂಗಳೂರು: ಕಾಂಗ್ರೆಸ್ ಪಕ್ಷ​ ಅಧಿಕಾರ ಬಂದ ಕೂಡಲೇ ಚುನಾವಣೆಗೂ ಮುನ್ನ ಘೋಷಿಸಿದ್ದ ಶಕ್ತಿ ಯೋಜನೆಯನ್ನು ಜಾರಿಗೆ ತರಲು ಸಕಲ ತಯಾರಿ ಮಾಡಿಕೊಳ್ಳುತ್ತಿದೆ. ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ಕಲ್ಪಿಸುವುದು ಈ ಶಕ್ತಿ ಯೋಜನೆಯ ಉದ್ದೇಶವಾಗಿದೆ.

ಜೂನ್​ 11ರಂದು ಈ ಯೋಜನೆ ಜಾರಿಗೆ ಬರಲಿದೆ. ಅಂದು ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಂದಿನಿಂದ ಮಹಿಳೆಯರು ರಾಜ್ಯದ್ಯಂತ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಸರ್ಕಾರ ಕೆಲವು ಷರತ್ತುಗಳನ್ನು ಹಾಕಿದೆ. ಬಸ್ ಸೇವೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿರುತ್ತದೆ. ರಾಜ್ಯದ ಒಳಗೆ ಮಾತ್ರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಎಕ್ಸ್‌ಪ್ರೆಸ್ ಬಸ್​ನಲ್ಲಿ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಬಿಎಂಟಿಸಿ ಮತ್ತು ಕೆಎಸ್​ಆರ್​​ಟಿಸಿ ಬಸ್​ನಲ್ಲಿ ಅವಕಾಶ ಇದೆ. ಎಸಿ ಮತ್ತು ಐಷಾರಾಮಿ ಬಸ್​ಗಳಲ್ಲಿ ಉಚಿತ ಪ್ರಯಾಣವಿಲ್ಲ. ರಾಜಹಂಸ ಬಸ್​ನಲ್ಲಿಯೂ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಇರುವುದಿಲ್ಲ. ಅಂತಾರಾಜ್ಯ ಪ್ರಯಾಣಕ್ಕೆ ಉಚಿತ ಸೌಲಭ್ಯ ಇರುವುದಿಲ್ಲ.

ಉಚಿತ ಪ್ರಯಾಣದ ವೇಳೆ ಮಹಿಳೆರಿಗೆ ಟಿಕೆಟ್​ ಕೊಡುತ್ತಾರಾ? ಅಥವಾ ಯಾವುದಾದರೂ ದಾಖಲೆ ತೆಗೆದುಕೊಂಡು ಹೋಗಬೇಕಾ ಎಂಬ ಗೊಂದಲ ಮಹಿಳೆಯರಲ್ಲಿದೆ. ಆದರೆ, ಆ ಗೊಂದಲಕ್ಕೆ ಈಗ ತೆರೆಬಿದ್ದಿದೆ. ಉಚಿತ ಪ್ರಯಾಣ ಹಿನ್ನೆಲೆಯಲ್ಲಿ ಬಸ್​ನಲ್ಲಿ ಟಿಕೆಟ್ ಪಡೆಯುವ ಗೋಜಿಲ್ಲ ಅಂತ ಮಹಿಳೆಯರು ಅಂದುಕೊಳ್ಳಬೇಡಿ. ಏಕೆಂದರೆ, ಕಂಡಕ್ಟರ್​ ಮಹಿಳೆಯರಿಗೂ ಟಿಕೆಟ್ ಕೊಡುತ್ತಾರೆ.

ಯಾವ ರೀತಿ ಇರುತ್ತೆ ಟಿಕೆಟ್?
ಯೋಜನೆ ಜಾರಿಗೂ ಮೊದಲು ನಾಲ್ಕು ನಿಗಮಗಳಲ್ಲೂ ಇದಕ್ಕಾಗಿ ಭಾರೀ ತಯಾರಿ ಕೂಡ ನಡೆಯುತ್ತಿದೆ. ಶಕ್ತಿ ಯೋಜನೆಯ ಹೊಸ ಟಿಕೆಟ್ ಈಗ ರಚನೆಯಾಗಿದೆ. ಟಿಕೆಟ್​ ಮೇಲೆ “ಮಹಿಳಾ ಪ್ರಯಾಣಿಕರ ಉಚಿತ ಚೀಟಿ ಶಕ್ತಿ ಯೋಜನೆ” ಎಂದು ಬರೆದಿರುತ್ತಾರೆ ಮತ್ತು ಟಿಕೆಟ್​ನಲ್ಲಿ ಯಾವುದೇ ಬೆಲೆ ನಮೂದಾಗುವುದಿಲ್ಲ. ಮಾಮೂಲಿಯಂತೆ ಕಂಡಕ್ಟರ್​ ಬಳಿ ಟಿಕೆಟ್​ ಪಡೆದುಕೊಳ್ಳಬೇಕು. ಆದರೆ, ಬದಲಾವಣೆ ಏನೆಂದರೆ, ಹಣ ಕೊಡುವಂತಿಲ್ಲ

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 20 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 72 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ