ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಸಂಶೋಧನಾ ಶ್ರೇಷ್ಠತಾ ಕೇಂದ್ರದ ನವೀನ ಕಟ್ಟಡದ ನೂತನ ಕಟ್ಟಡದ ಉದ್ಘಾಟನೆಯನ್ನು ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ಉದ್ಘಾಟಿಸಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರುಗಳಾದ ಕೆ. ಹರೀಶ್ ಕುಮಾರ್, ಕೆ. ಪ್ರತಾಪಸಿಂಹ ನಾಯಕ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮುಖ್ಯ ಕುಲಪತಿ ಡಾ.ಎಸ್. ಸಚ್ಚಿದಾನಂದ, ಆಯುಷ್ ನಿರ್ದೇಶನಾಲಯದ ಆಯುಕ್ತೆ ಶ್ರೀಮತಿ ಮೀನಾಕ್ಷಿ ನೇಗಿ, ಆಯುಷ್ ಮಂತ್ರಾಲಯದ ನಿರ್ದೇಶಕ ವಿಕ್ರಮ್ ಸಿಂಗ್, ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ.ಹರ್ಷೇಂದ್ರ ಕುಮಾರ್, ಡಾ. ಯಶೋವರ್ಮ, ಉಪಾಧ್ಯಕ್ಷರುಗಳಾದ ಪ್ರೊ.ಎಸ್.ಪ್ರಭಾಕರ್, ಡಿ.ಸುರೇಂದ್ರ ಕುಮಾರ್, ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ, ಡಾ. ಪ್ರಶಾಂತ್ ಶೆಟ್ಟಿ, ಸಿಬ್ಬಂದಿ ವರ್ಗ ಮತ್ತು ಉಪನ್ಯಾಸಕ ವೃಂದದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.