ಮಲೆನಾಡಿನಲ್ಲಿ ನಡೆದ ಬಹುದೊಡ್ಡ ದುರಂತ! ಅಕ್ರಮ ಕಲ್ಲುಗಣಿಗಾರಿಕೆಯಲ್ಲಿ ಬಹುದೊಡ್ಡ ಸ್ಪೋಟ! ಲಾರಿಯಲ್ಲಿದ್ದ ಜಿಲೆಟಿನ್ ಬ್ಲಾಸ್ಟ್! 10 ಮಂದಿ ಸಾವನ್ನಪ್ಪಿದ ಸಾದ್ಯತೆ! ಶಿವಮೊಗ್ಗದ ಹುಣುಸೋಡು ರೈಲ್ವೇ ಕ್ರಷರ್ ನಲ್ಲಿ ನಡೆದ ದುರ್ಘಟನೆ

ಶಿವಮೊಗ್ಗ: ಶಿವಮೊಗ್ಗದ ಅಬ್ಬಲಗೆರೆ ಹುಣಸೋಡು ಬಳಿ ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ಭಾರಿ ಸ್ಪೋಟವಾಗಿದ್ದು ಮಲೆನಾಡಿನಲ್ಲಿ ಬಹುದೊಡ್ಡ ದುರ್ಘಟನೆ ನಡೆದಿದ್ದು 10 ರಿಂದ 15 ಮಂದಿ ಸಾವಿಗೀಡಾಗಿರುವ ಸಾಧ್ಯತೆಯಿದೆ.

ಲಾರಿಯಲ್ಲಿ ಡೈನಾಮೆಟ್ ಸ್ಪೋಟಗೊಂಡು ಲಾರಿ ಛಿದ್ರವಾಗಿದ್ದು ಬಿಹಾರ ಮೂಲದ 15 ಕ್ಕೂ ಅಧಿಕ ಕಾರ್ಮಿಕರು ಸಾವನ್ನಪ್ಪಿದ ಸಾದ್ಯತೆಯಿದೆ.

ಬ್ಲಾಸ್ಟ್ ಆದ ಲಾರಿಯ ಅವಶೇಷಗಳು

ಡೈನಾಮೆಟ್ ಸ್ಪೋಟದ ತೀವ್ರತೆಗೆ ಕಾರ್ಮಿಕರ ದೇಹ ಛಿದ್ರಛಿದ್ರವಾಗಿದೆ. ಅನಿಲ್ ಎಂಬುವವರ ಒಡೆತನಕ್ಕೆ ಸೇರಿದ ಕ್ರಷರ್‌ನಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟ ಸಂಭವಿಸಿದ ಗಂಟೆ ಕಳೆದರೂ ಪೊಲೀಸರು ಸ್ಥಳಕ್ಕೆ ಆಗಮಿಸಿರಲಿಲ್ಲ. ಹಾಗೆಯೇ ಸ್ಥಳದಲ್ಲಿ ಸ್ಫೋಟಗೊಳ್ಳದ ಜೀವಂತ ಡೈನಾಮೈಟ್‌ಗಳು ಇರುವ ಸಾಧ್ಯತೆ ಇದೆ ಎಂಬ ಭೀತಿ ಕೂಡ ಇದೆ.

ಇಡೀ ಜಿಲ್ಲೆಯಲ್ಲಿ ಅಷ್ಟೇ ಅಲ್ಲದೇ ಚಿಕ್ಕಮಗಳೂರು, ಶಿರಸಿ, ಸಿದ್ದಾಪುರ, ದಾವಣಗೆರೆಯಲ್ಲೂ ಕೇಳಿಬಂದ ಶಬ್ದಕ್ಕೆ ಇದು ಕಾರಣವಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ. ಅಥವಾ ಭಾರೀ ಶಬ್ದದ ತೀವ್ರತೆಗೆ ಡೈನಾಮೈಟ್‌ ಬ್ಲಾಸ್‌ ಆಗಿರಬಹುದು ಎಂಬ ಶಂಕೆಯೂ ವ್ಯಕ್ತವಾಗಿದೆ.

ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿಗಳು, ಪೋಲೀಸ್ ವರಿಷ್ಠಾಧಿಕಾರಿಯವರು ಬೇಟಿ ನೀಡಿ ಪರಿಶೀಲನೆ ನಡೆಸುತಿದ್ದಾರೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 3 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ