ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

ಶಿರೂರು: ಉತ್ತರ ಕನ್ನಡ ಜಿಲ್ಲೆ‌ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಭೇಟಿನೀಡಿ, ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದರು.

ಮಣ್ಣಿನಡಿ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಅಪಾಯಕಾರಿ ಗುಡ್ಡವಿದೆ. ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ. ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ಸಿಬ್ಬಂದಿಗಳ ಕಾರ್ಯಕ್ಷಮತೆಗೆ ನಿಜಕ್ಕೂ ಶ್ಲಾಘನೀಯ. ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಹಲವು ದಿನಗಳಿಂದ ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಸ್ಥಳದಲ್ಲಿ ನಿಂತು ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆ ಇದೆ. ಹೀಗಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಗಳು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಿದ್ದೇನೆ. ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು, ಅಗತ್ಯ ತಂತ್ರಜ್ಞಾನದ ನೆರವು ಪಡೆಯುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.

Spread the love
  • Related Posts

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    ಬೆಳ್ತಂಗಡಿ: ಶಿಶಿಲ ಗ್ರಾಮದ ಕಾರೆಗುಡ್ಡೆಯ ಮಹೇಶ್ ರವರಿಗೆ ಇತ್ತೀಚೆಗೆ ವಿಷದ ಹಾವು ಕಚ್ಚಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇವರ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿಯವರು ಭೇಟಿ ನೀಡಿ ಆರ್ಥಿಕ ನೆರವು ನೀಡಿ, ಗ್ರಾಮಸ್ಥರ ಸಮ್ಮುಖದಲ್ಲಿ ಸಾಂತ್ವನ ಹೇಳಿ ಧೈರ್ಯ…

    Spread the love

    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    ಮುಂಡಾಜೆ: ಮುಂಡಾಜೆಯ ಕಾಪು ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ್ದು ಕಾರು ನಜ್ಜುಗುಜ್ಜಾಗಿದ್ದು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. Spread the love

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ